ADVERTISEMENT

ಪುತ್ತೂರು: ಉಡುಪಿ ನಗರಾಭಿವೃದ್ಧಿ ಅಧಿಕಾರಿ ನಿವಾಸದಲ್ಲಿ ಎಸಿಬಿ ಶೋಧ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 17:32 IST
Last Updated 9 ಮಾರ್ಚ್ 2021, 17:32 IST

ಉಡುಪಿ: ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ವಡ್ಡಾಡು ಅವರ ಪುತ್ತೂರಿನ ನಿವಾಸದಲ್ಲಿ ಮಂಗಳವಾರ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ದಾಳಿ ವೇಳೆ ಚಿನ್ನ, ಬೆಳ್ಳಿ ಹಾಗೂ ಆಸ್ತಿಯ ದಾಖಲೆ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಧ್ಯ ಮೈಸೂರು ನಗರ ಹಾಗೂ ಗ್ರಾಮಾಂತರ ಯೋಜನೆಗಳ ಜಂಟಿ ನಿರ್ದೇಶಕರಾಗಿರುವ ಸುಬ್ರಹ್ಮಣ್ಯ ವಡ್ಡಾರು ಹಿಂದೆ ಉಡುಪಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT