ADVERTISEMENT

ಕೋವಿಡ್‌ ಪರೀಕ್ಷೆ; ವದಂತಿಗಳನ್ನು ನಂಬಬೇಡಿ: ಶಾಸಕ ರಘುಪತಿ ಭಟ್‌

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 15:08 IST
Last Updated 2 ಸೆಪ್ಟೆಂಬರ್ 2020, 15:08 IST
ರಘುಪತಿ ಭಟ್‌, ಶಾಸಕ
ರಘುಪತಿ ಭಟ್‌, ಶಾಸಕ   

ಉಡುಪಿ: ಕೋವಿಡ್‌ ಪಾಸಿಟಿವ್ ನೆಗೆಟಿವ್ ವರದಿ ನೀಡುವ ವಿಚಾರದಲ್ಲಿ ಲಾಬಿ ನಡೆಯುತ್ತಿದ್ದು ಕಮಿಷನ್‌ ಪಡೆಯಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಶಾಸಕ ರಘುಪತಿ ಭಟ್‌ ಮನವಿ ಮಾಡಿದ್ದಾರೆ.

ಆರಂಭದಲ್ಲಿ ಕೋವಿಡ್‌ ಮಾರಣಾಂತಿಕವಲ್ಲ; ಸಾಂಕ್ರಾಮಿಕ ಎಂದು ಭಾವಿಸಲಾಗಿತ್ತು. ಈಚೆಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ, ಸೋಂಕಿನ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ತಕ್ಷಣ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಸೋಂಕು ತಗುಲಿದರೂ ಕೆಲವರು ಮನೆಯಲ್ಲಿಯೇ ಇದ್ದು, ತಡವಾಗಿ ಚಿಕಿತ್ಸೆಗೆ ಬರುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಸರ್ಕಾರ ರೋಗಿಗಳ ಜೀವ ಉಳಿಸಲು ಅಗತ್ಯ ಕ್ರಮಕೈಗೊಂಡಿದೆ. ಲಕ್ಷಣಗಳು ಕಂಡುಬಂದರೆ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದಿದ್ದರೆ, ಆರೋಗ್ಯ ಸಮಸ್ಯೆಗಳಿಲ್ಲದಿದ್ದರೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.