ಉಡುಪಿ: ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರನ್ನು ನೇಮಕ ಮಾಡಲಾಗಿದೆ.
ಶಾಸಕರಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರು, ಸೋಮನಗೌಡ ಬಿ. ಪಾಟೀಲ್, ಹರೀಶ್ ಪೂಂಜ, ಸಂಜೀವ ಮಠಂದೂರು, ಉದಯ ಬಿ. ಗರುಡಾಚಾರ್, ವೆಂಕಟರೆಡ್ಡಿ ಮುದ್ನಾಳ್, ಎಂ.ಬಿ. ಪಾಟೀಲ್, ಎಸ್.ಎನ್. ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ, ಎಸ್.ಎನ್. ಸುಬ್ಬಾರೆಡ್ಡಿ, ಎಸ್. ರಾಮಪ್ಪ, ಡಾ.ಕೆ. ಶ್ರೀನಿವಾಸಮೂರ್ತಿ ಮತ್ತು ರವೀಂದ್ರ ಶ್ರೀಕಂಠಯ್ಯ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸದನದಲ್ಲಿ ಸರ್ಕಾರ ನೀಡುವ ಭರವಸೆಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ಪರಿಶೀಲಿಸುವುದು ಸಮಿತಿಯ ಹೊಣೆಗಾರಿಕೆ. ಪ್ರತಿ ವಾರ ಸಮಿತಿ ಸದಸ್ಯರು ಸಭೆ ಸೇರಿ, ಚರ್ಚಿಸಿ ಸರ್ಕಾರ ನೀಡಿದ ಭರವಸೆಗಳು ಈಡೇರಿವೆಯೇ, ಯಾವ ಹಂತದಲ್ಲಿವೆ ಎಂಬ ಕುರಿತು ಚರ್ಚೆ ನಡೆಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.