ADVERTISEMENT

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಮೇ 2021, 16:38 IST
Last Updated 11 ಮೇ 2021, 16:38 IST

ಉಡುಪಿ:ಮೇ14ರಿಂದ 16ರವರೆಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, 5 ದಿನಗಳ ಕಾಲ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದಿಂದ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿದ್ದು, ಮೀನುಗಾರರು ಸಮುದ್ರಕ್ಕೆ ಹಾಗೂ ನದಿಗಳಿಗೆ ಇಳಿಯದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ವಿಕೋಪ ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.