ADVERTISEMENT

ಚಂಡಮಾರುತ ಪ್ರಭಾವ: ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 11 ಮೇ 2022, 11:45 IST
Last Updated 11 ಮೇ 2022, 11:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಅಸಾನಿ ಚಂಡಮಾರುತದ ಪ್ರಭಾವದಿಂದ ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. ಕುಂದಾಪುರ, ಬೈಂದೂರು, ಕಾರ್ಕಳ, ಬ್ರಹ್ಮಾವರ, ಹೆಬ್ರಿ, ಕಾಪು ಹಾಗೂ ಉಡುಪಿ ತಾಲ್ಲೂಕುಗಳಲ್ಲಿ ಬಿರುಸಿನ ಮಳೆಯಾಗಿದೆ.

ಕುಂದಾಪುರ, ಬ್ರಹ್ಮಾವರ, ಕಾಪು ತಾಲ್ಲೂಕುಗಳ ಮೇಲೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಹಲುವೆಡೆ ಸೇವಾ ರಸ್ತೆಗಳಲ್ಲಿ ಜಲಾವೃತಗೊಂಡಿದ್ದು ಕೃತಕ ನೆರೆ ಸೃಷ್ಟಿಯಾಗಿದೆ.

ಚಂಡಮಾರುತ ಪ್ರಭಾವದಿಂದ ಮಲ್ಪೆಯ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ದೈತ್ಯ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಮೇ 13ರವರೆಗೆ ಬಿರುಸಿನ ಮಳೆ ಸುರಿಯಲಿದ್ದು, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.