ADVERTISEMENT

ಕರಾವಳಿಯಲ್ಲಿ ಮಳೆ: ಚುರುಕುಗೊಂಡ ಕೃಷಿ ಕಾರ್ಯ

ಕರಾವಳಿಯಲ್ಲಿ ಚುರುಕುಗೊಂಡ ಮಳೆ: ಕೋಟ ಹೋಬಳಿಯಲ್ಲಿ ಭತ್ತದ ನಾಟಿ ಆರಂಭ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 2:28 IST
Last Updated 23 ಜೂನ್ 2022, 2:28 IST
ಕೋಟ ಹೋಬಳಿಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ಆರಂಭಗೊಂಡಿದೆ
ಕೋಟ ಹೋಬಳಿಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ಆರಂಭಗೊಂಡಿದೆ   

ಬ್ರಹ್ಮಾವರ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ವೇಗ ಪಡೆದುಕೊಂಡು ಕೋಟ ಹೋಬಳಿಯಲ್ಲಿ ನಾಟಿ ಕಾರ್ಯ ಆರಂಭಗೊಂಡಿದೆ.

ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗಿ, ಭತ್ತದ ಬೆಳೆಗೆ ಪೂರಕ ವಾತಾವರಣ ಸೃಷ್ಟಿಯಾಗಿ ಕೃಷಿಕರು ನಾಟಿ ಕಾರ್ಯಕ್ಕೆ ಸಿದ್ಧತೆ ಬೇಗ ಮಾಡಿಕೊಳ್ಳಲು ಸಾಧ್ಯವಾಗಿತ್ತು. ರೈತರು ಮೇ ತಿಂಗಳಿನಲ್ಲಿಯೇ ಗದ್ದೆ ಉಳುಮೆ ಮಾಡಿ ಬೀಜ ಬಿತ್ತನೆ ಮಾಡಿ ಸಸಿಗಳನ್ನು ತಯಾರಿಸಿದ್ದರು.ಇದೀಗ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಕೋಟ ಹೋಬಳಿಯ ಬಹುತೇಕ ಕಡೆ ನಾಟಿ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

ಉತ್ತಮ ಮುಂಗಾರಿನ ಕಾರಣ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಡುಪಿಯಲ್ಲಿ ಸುಮಾರು 38 ಸಾವಿರ ಹೆಕ್ಟೇರ್ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಕೃಷಿ ಇಲಾಖೆಯ ಮೂಲಕ 2 ಸಾವಿರ ಕ್ವಿಂಟಾಲ್‌ಗೂ ಅಧಿಕ ಭತ್ತದ ಬೀಜವನ್ನು ವಿತರಿಸಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ಮತ್ತು ಹಡಿಲು ಭೂಮಿ ಯೋಜನೆಯಡಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಭತ್ತದ ಕೃಷಿಯಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಗೆ. ಉತ್ತಮ ಮಳೆರಾಯನ ಕೃಪೆಯಿಂದ ಈ ಬಾರಿ ಒಳ್ಳೆಯ ಫಸಲಿನ ನಿರೀಕ್ಷೆಯಲ್ಲಿ ರೈತರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.