ADVERTISEMENT

ಉಡುಪಿ: ಬಿರುಸು ಮಳೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 15:09 IST
Last Updated 11 ಜೂನ್ 2020, 15:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಬಿರುಸಾಗಿದ್ದು, ಬೈಂದೂರು, ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಉಡುಪಿ ಭಾಗಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ.

ಗುರುವಾರ ದಿನವಿಡೀ ಮೋಡಕವಿದ ವಾತಾವರಣವಿದ್ದು, ಆಗಾಗ ಬಿರುಸಾಗಿ ಮಳೆ ಸುರಿಯಿತು. ಗಾಳಿಯ ಅಬ್ಬರವೂ ಜೋರಾಗಿತ್ತು.ಬುಧವಾರ ರಾತ್ರಿ ಸುರಿದ ಬಿರುಸಿನ ಮಳೆಗೆ ಹಳ್ಳಗಳು, ತೊರೆಗಳು ಉಕ್ಕಿ ಹರಿದಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.ಬೈಂದೂರಿನಲ್ಲಿ ಮನೆಗಳ ಮೇಲೆ ಮರಬಿದ್ದು ಭಾಗಶಃ ಹಾನಿಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿಯಲ್ಲಿ 86.6 ಮಿ.ಮೀ, ಕುಂದಾಪುರದಲ್ಲಿ 107.4, ಕಾರ್ಕಳದಲ್ಲಿ 79.5 ಮಿ.ಮೀ ಮಳೆ ಸುರಿದಿದ್ದು, ಜಿಲ್ಲೆಯಲ್ಲಿ 9.3 ಸೆ.ಮೀ ಮಳೆ ಬಿದ್ದಿದೆ.

ADVERTISEMENT

ಜೂನ್‌ 12ರಿಂದ ಕರಾವಳಿಯಲ್ಲಿ ಬಿರುಸಿನ ಮಳೆ ಸುರಿಯಲಿದೆ. ಮಳೆಯ ಪ್ರಮಾಣ 125 ಮಿ.ಮೀಗಿಂತ ಹೆಚ್ಚಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.