ADVERTISEMENT

ಉಡುಪಿ: 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ರೆಡ್ ಅಲರ್ಟ್‌

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 16:34 IST
Last Updated 14 ಜೂನ್ 2021, 16:34 IST

ಉಡುಪಿ: ಜಿಲ್ಲೆಯಾದ್ಯಂತ ಸೋಮವಾರವೂ ಮಳೆ ಮುಂದುವರಿದಿದೆ. ಬಿರುಗಾಳಿ ಸಹಿತ ಸುರಿದ ಮಳೆಗೆ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ದನದ ಕೊಟ್ಟಿಗೆಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಉಡುಪಿ ತಾಲ್ಲೂಕಿನ ಹಿರೇಬೆಟ್ಟು, ಕಡೆಕಾರ್, ಕುತ್ಪಾಡಿ, ಬೈಂದೂರು ತಾಲ್ಲೂಕಿನ ಉಪ್ಪುಂದ, ಹೆಬ್ರಿ ತಾಲ್ಲೂಕಿನ ಬೀಳಂಜೆ, ಶಿವಪುರ, ಕಾಪು ತಾಲ್ಲೂಕಿನ ಹೆಜಮಾಡಿ, ಬೆಳ್ಳೆ, ಮೂಡುಬೆಟ್ಟು, ಕುಂದಾಪುರ ತಾಲ್ಲೂಕಿನ ಕೊರ್ಗಿ, ಹೊಸಾಡು ಬ್ರಹ್ಮಾವರ ತಾಲ್ಲೂಕಿನ ಹೊಸಾಳ, ಹಿಲಿಯಾಣ, ಕಾರ್ಕಡ, ಕೋಟತಟ್ಟು, ಕಾರ್ಕಳ ತಾಲ್ಲೂಕಿನ ಪಳ್ಳಿಯಲ್ಲಿ ಮನೆಗಳಿಗೆ ಹಾನಿಯಾಗಿದೆ. ಮಿಯಾರು ಗ್ರಾಮದಲ್ಲಿ ಗಾಳಿ ಮಳೆಗೆ 1 ಎಕರೆ ಬಾಳೆ ತೋಟಕ್ಕೆ ಹಾನಿಯಾಗಿದೆ. ಜಿಲ್ಲೆಯಲ್ಲಿ 7.1 ಸೆಂ.ಮೀ ಮಳೆ ಬಿದ್ದಿದೆ.

ರೆಡ್ ಅಲರ್ಟ್‌:

ADVERTISEMENT

ಜೂನ್ 15 ಹಾಗೂ 16ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.