ADVERTISEMENT

ನಾಡ್ಪಾಲಿನಲ್ಲಿ 22.9 ಸೆಂ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 12:50 IST
Last Updated 2 ಜುಲೈ 2022, 12:50 IST

ಉಡುಪಿ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಹೆಬ್ರಿ ತಾಲ್ಲೂಕಿನ ನಾಡ್ಪಾಲಿನಲ್ಲಿ ರಾಜ್ಯದಲ್ಲೇ ಗರಿಷ್ಠ 22.9 ಸೆಂಮೀ ಮಳೆ ಬಿದ್ದಿದೆ. ಹೆಬ್ರಿಯಲ್ಲಿ 22 ಸೆಂ.ಮೀ ಮಳೆಯಾಗಿದೆ.

ಜುಲೈ 7ರವರೆಗೆ ಕರಾವಳಿ ಜಿಲ್ಲೆಯಾದ್ಯಂತ ಬಾರಿ ಮಳೆಯಾಗುವ ಮುನ್ಸೂಚನೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಾಳಿ ಮಳೆಗೆ ಕಾಪು ಕಾಲ್ಲೂಕಿನ ಕುರ್ಕಾಲು, ಯೇಣಗುಡ್ಡೆ, ಹೆಬ್ರಿ ತಾಲ್ಲೂಕಿನ ಶಿವಪುರ, ಬ್ರಹ್ಮಾವರ ತಾಲ್ಲೂಕಿನ ಕುಮ್ರಗೋಡು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.