ADVERTISEMENT

ಉಡುಪಿ: ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 12:56 IST
Last Updated 20 ಜೂನ್ 2021, 12:56 IST

ಉಡುಪಿ: ಜಿಲ್ಲೆಯಾದ್ಯಂತ ಭಾನುವಾರವೂ ಬಿರುಸಿನ ಮಳೆ ಸುರಿಯಿತು. ಉಡುಪಿ ತಾಲ್ಲೂಕಿನ ಶಿವಳ್ಳಿ, ಕಾಪು ತಾಲ್ಲೂಕಿನ ಪಡು, ಪಲಿಮಾರು, ಕಾರ್ಕಳ ತಾಲ್ಲೂಕಿನ ನಿಟ್ಟೆ, ಹೆಬ್ರಿ ತಾಲ್ಲೂಕಿನಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ.

ಕಾಪು ತಾಲ್ಲೂಕಿನಲ್ಲಿ ಸಿಡಿಲು ಬಡಿದು ಹಲವು ಮನೆಗಳಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಸುಟ್ಟುಹೋಗಿದೆ. ‌ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಮುಂಭಾಗ ಜಲಾವೃತಗೊಂಡಿದೆ. ಬೆಳಪು, ಅದಮಾರು, ಎರ್ಮಾಳು, ಮಜೂರು, ಕುತ್ಯಾರು, ಇನ್ನಂಜೆಯಲ್ಲಿ ನೆರೆಭೀತಿ ಸೃಷ್ಟಿಯಾಗಿದೆ.

24 ಗಂಟೆಗಳಲ್ಲಿ 9.1 ಸೆಂ.ಮೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬುದ್ದಿವೆ. ಮರಗಳು ಧರೆಗುರುಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.