ಹೆಬ್ರಿ: ನೇತಾಜಿ ಚಾರಿಟಬಲ್ ಟ್ರಸ್ಟ್ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಹುಮುಖ ಪ್ರತಿಭೆಯ ಬಲ್ಲಾಡಿ ಚಂದ್ರಶೇಖರ ಭಟ್‌ಗೆ ‘ರಾಜ್ಯ ವಿಭೂಷಣ’ ಪ್ರಶಸ್ತಿ -24 ನೀಡಿ ಗೌರವಿಸಲಾಯಿತು.
ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಾಹಿತ್ಯಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಈಗಾಗಲೇ ಹಲವು ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದು, ವಿವಿಧ ಸಂಘ–ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.