ADVERTISEMENT

ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 16:15 IST
Last Updated 6 ಅಕ್ಟೋಬರ್ 2022, 16:15 IST
ರಾಜ್ಯದಾದ್ಯಂತ ಸಂಚರಿಸುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯನ್ನು ಗುರುವಾರ ನಗರದ ಜೋಡುಕಟ್ಟೆ ಬಳಿ ಬರಮಾಡಿಕೊಂಡ ಜಿಲ್ಲಾಧಿಕಾರಿ ಕೂರ್ಮಾರಾವ್ ಪೂಜೆ ಸಲ್ಲಿಸಿದರು.
ರಾಜ್ಯದಾದ್ಯಂತ ಸಂಚರಿಸುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯನ್ನು ಗುರುವಾರ ನಗರದ ಜೋಡುಕಟ್ಟೆ ಬಳಿ ಬರಮಾಡಿಕೊಂಡ ಜಿಲ್ಲಾಧಿಕಾರಿ ಕೂರ್ಮಾರಾವ್ ಪೂಜೆ ಸಲ್ಲಿಸಿದರು.   

ಉಡುಪಿ: ಐತಿಹಾಸಿಕ ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆ ಗುರುವಾರ ಉಡುಪಿ ನಗರದ ಜೋಡುಕಟ್ಟೆ ಪ್ರವೇಶಿಸಿದಾಗ ಜಿಲ್ಲಾಧಿಕಾರಿ ಕೂರ್ಮಾರಾವ್ ಪೂಜೆ ಸಲ್ಲಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್‌
ಲಿಮಿಟೆಡ್ ಅಧ್ಯಕ್ಷ ಕೆ.ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸದಸ್ಯರಾದ ರಜನಿ ಹೆಬ್ಬಾರ್, ರಶ್ಮಿ ಚಿತ್ತರಂಜನ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT