ADVERTISEMENT

Karnataka Budget 2025: ಅಭಿವೃದ್ಧಿಗೆ ಪೂರಕ –ಅನ್ನಪೂರ್ಣ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2025, 14:23 IST
Last Updated 8 ಮಾರ್ಚ್ 2025, 14:23 IST
ಅನ್ನಪೂರ್ಣ
ಅನ್ನಪೂರ್ಣ   

ಕೊಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಮಲೆನಾಡು ಭಾಗದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ, ಭೂ ಮಂಜೂರಾತಿ ಸಮಿತಿ ಸದಸ್ಯೆ ಅನ್ನಪೂರ್ಣ ನರೇಶ್ ಹೇಳಿದ್ದಾರೆ.

ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗೆ ಒಟ್ಟಾರೆಯಾಗಿ ₹83 ಕೋಟಿ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 20 ಚ.ಕಿ.ಮೀ ವ್ಯಾಪ್ತಿಯಲ್ಲಿ ‘ಕಾಡಾನೆ ಸಾಫ್ಟ್ ರಿಲೀಸ್ ಕೇಂದ್ರ’ ಸ್ಥಾಪಿಸಲು ₹20 ಕೋಟಿ ಅನುದಾನ, ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ₹50 ಕೋಟಿ, ಎಲೆಚುಕ್ಕಿ ರೋಗ ನಿಯಂತ್ರಿಸಲು ₹62 ಕೋಟಿ, ನಕ್ಸಲ್ ಬಾಧಿತ ಪ್ರದೇಶಕ್ಕೆ ₹10 ಕೋಟಿ ವಿಶೇಷ ಪ್ಯಾಕೇಜ್, ವನ್ಯಜೀವಿಗಳಿಂದ ಮೃತಪಟ್ಟವರಿಗೆ ನೀಡಲಾಗುತ್ತಿದ್ದ ಪರಿಹಾರ ₹15 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಿಸಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT