ADVERTISEMENT

ಮಾನಸಿಕ ಪರಿಪಕ್ವತೆಗೆ ಓದು ಅಗತ್ಯ: ಅಶೋಕ್ ಕಾಮತ್

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 12:49 IST
Last Updated 5 ಜೂನ್ 2025, 12:49 IST
ಉಡುಪಿ ಬಾಲಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಈಚೆಗೆ  ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜರುಗಿತು
ಉಡುಪಿ ಬಾಲಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಈಚೆಗೆ  ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜರುಗಿತು   

ಉಡುಪಿ: ಹೆಚ್ಚು ಹೆಚ್ಚು ಪುಸ್ತಕ ಓದುವುದರಿಂದ ಮಕ್ಕಳು ಮಾನಸಿಕವಾಗಿ ಪರಿಪಕ್ವರಾಗುತ್ತಾರೆ. ಮುಂದಿನ ಜೀವನದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಗಳಿಸುತ್ತಾರೆ ಎಂದು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್ ಅಭಿಪ್ರಾಯಪಟ್ಟರು.

ಉಡುಪಿ ಬಾಲಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಈಚೆಗೆ ನಡೆದ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಮ್ಮ ಮಾತನಾಡಿ, ನಿರಂತರ ಅಭ್ಯಾಸ ಮತ್ತು ಸತತ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆದುಕೊಳ್ಳಬಹುದು ಎಂದರು.

ADVERTISEMENT

ಉಡುಪಿ ಡಯಟ್‌ನ ಉಪನ್ಯಾಸಕ ಯೋಗನರಸಿಂಹ ಸ್ವಾಮಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನವ್ಯ ನಾಯಕ್ ಇದ್ದರು. ಇಂದಿರಾ ಸ್ವಾಗತಿಸಿದರು. ಶೇಖರ್ ನಿರೂಪಿಸಿದರು. ಜ್ಯೋತಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.