ADVERTISEMENT

ಉಡುಪಿ: ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್‌

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 16:13 IST
Last Updated 6 ಸೆಪ್ಟೆಂಬರ್ 2022, 16:13 IST

ಉಡುಪಿ: ಜಿಲ್ಲೆಯಾದ್ಯಂತ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆ.7ರಂದು ರೆಡ್‌ ಅಲರ್ಟ್‌, 8 ಹಾಗೂ 9ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ವಿಪತ್ತು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT