ADVERTISEMENT

ಉಡುಪಿ | ಕೆಂಪು ಕಲ್ಲು ದುಬಾರಿ ಯಾಕೆ: ಸುರೇಶ್

ಕೆಂಪು ಕಲ್ಲು ಸಮಸ್ಯೆ ಪರಿಹಾರಕ್ಕೆ ಆಗ್ರಹ: ಧರಣಿ ಎರಡನೇ ದಿನಕ್ಕೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 3:08 IST
Last Updated 20 ಆಗಸ್ಟ್ 2025, 3:08 IST
ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಎರಡನೇ ದಿನದ ಧರಣಿ ನಡೆಯಿತು
ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಎರಡನೇ ದಿನದ ಧರಣಿ ನಡೆಯಿತು   

ಉಡುಪಿ: ನಿರ್ಮಾಣ ಕಾರ್ಮಿಕರು ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳಿಂದ ಧರಣಿ ನಡೆಸಿದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದರು.

ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ನಡೆದ ಎರಡನೇ ದಿನದ ಧರಣಿಯಲ್ಲಿ ಅವರು ಮಾತನಾಡಿದರು.

ಕೆಂಪು ಕಲ್ಲು ಕೊರತೆ ಇಲ್ಲ ಎಂದು ಜಿಲ್ಲಾಡಳಿತ ಹೇಳುತ್ತಿದೆ ಹಾಗಾದರೆ ಕೆಂಪು ಕಲ್ಲು ಬೆಲೆ ದುಬಾರಿ ಯಾಕಾಗಿದೆ ಎಂದು ಉತ್ತರಿಸಬೇಕು. ಈಗಾಗಲೇ ಕಾನೂನು ಬದ್ಧ ಪರವಾನಗಿ ನೀಡಿದ ಕೋರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಕಾರ್ಮಿಕರ ಸಂಘಟನೆಗಳ ಜೊತೆ ಜಂಟಿ ಸಭೆ ನಡೆಸಬೇಕು ಇಲ್ಲವಾದಲ್ಲಿ ಇನ್ನಷ್ಟು ದಿನ ಧರಣಿ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಷನ್ (ಸಿಐಟಿಯು) ರಾಜ್ಯ ಘಟಕ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಮರಳು ಸಮಸ್ಯೆ ಬಗೆಹರಿಸಲು ಪ್ರತಿ ವರ್ಷ ಮೇ ತಿಂಗಳಲ್ಲಿ ಮುಂದಿನ ಆಗಸ್ಟ್ ತಿಂಗಳಲ್ಲಿ ಕೊರತೆಯಾಗುವ ಮರಳನ್ನು ಕಾರ್ಮಿಕರಿಗೆ ನೀಡಬೇಕು ಎಂದು ಮನವಿ ನೀಡಿದರೂ ಕಡೆಗಣನೆ ಮಾಡಲಾಗುತ್ತಿದೆ ಎಂದರು.

ಸಿಐಟಿಯು ಜಿಲ್ಲಾ ಘಟಕ ಅಧ್ಯಕ್ಷ ಕೆ. ಶಂಕರ್, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಚಂದ್ರಶೇಖರ ವಿ., ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಸುಭಾಷ್ ಚಂದ್ರ ನಾಯಕ್, ರಾಜೀವ ಪಡುಕೋಣೆ, ರಾಮ ಕಾರ್ಕಡ, ಸಯ್ಯದ್ ಅಲಿ, ನಾಗೇಶ್ ಆಚಾರ್ಯ ಕಾರ್ಕಳ, ಸರೋಜ ಮಾತನಾಡಿದರು.

ಧರಣಿಯಲ್ಲಿ ಸಿಐಟಿಯು ಮುಖಂಡರಾದ ಉಮೇಶ್ ಕುಂದರ್, ನಳಿನಿ, ಶಶಿಧರ ಗೊಲ್ಲ, ವಾಮನ ಪೂಜಾರಿ, ಕವಿರಾಜ್ ಎಸ್. ಕಾಂಚನ್, ಮೋಹನ, ದಯಾನಂದ ಕೋಟ್ಯಾನ್ ಉಪಸ್ಥಿತರಿದ್ದರು.

ಕೆಂಪು ಕಲ್ಲು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 20ರಂದು ಜಿಲ್ಲೆಯ ಸಾವಿರಾರು ಕಟ್ಟಡ ಕಾರ್ಮಿಕರು ಮಣಿಪಾಲದ ಟೈಗರ್ ಸರ್ಕಲ್ ಬಳಿಯಿಂದ ಬೃಹತ್ ಮೆರವಣಿಗೆ ನಡೆಸಲಿದ್ದಾರೆ
ಬಾಲಕೃಷ್ಣ ಶೆಟ್ಟಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.