ADVERTISEMENT

ರಾಮಮಂದಿರ ನಿರ್ಮಾಣಕ್ಕಾಗಿ ಧಾರ್ಮಿಕ ಅನುಷ್ಠಾನ ಸಂಕಲ್ಪ ಅಭಿಯಾನ 25ರಂದು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2018, 13:07 IST
Last Updated 20 ಡಿಸೆಂಬರ್ 2018, 13:07 IST
ಪತ್ರಿಕಾಗೋಷ್ಠಿಯಲ್ಲಿ ವಿಶ್ವಹಿಂದು ಪರಿಷದ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪುವೆಲ್‌ ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ವಹಿಂದು ಪರಿಷದ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪುವೆಲ್‌ ಮಾತನಾಡಿದರು.   

ಉಡುಪಿ: ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ಸಹಯೋಗದಲ್ಲಿ ಡಿ. 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಕಡಿಯಾಳಿಯ ಮಹಿಷ ಮರ್ಧಿನಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಪಠಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕಾಗಿ ಧಾರ್ಮಿಕ ಅನುಷ್ಠಾನ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಕೇಶವ ಭಾಗವಹಿಸಲಿದ್ದಾರೆ. ಸಾಧು, ಸಂತರು, ಧಾರ್ಮಿಕ ಮುಖಂಡರು ಸೇರಿದಂತೆ ಜಿಲ್ಲೆಯ ರಾಮ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಡಿ.25ರಂದು ಮಂಗಳೂರಿನ ಶ್ರೀ ಕೃಷ್ಣ ಮಂದಿರದಲ್ಲಿ ಶ್ರೀ ಸೀತಾರಾಮ ದೇವರ ಪ್ರತಿಷ್ಠೆ, ರಾಮತಾರಕ ಹೋಮ ಮತ್ತು ನಿರಂತರ ರಾಮನಾಮ ಸಂಕೀರ್ತನೆ ನಡೆಯಲಿದೆ. 26ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿಜಯ ಮಹಾಮಂತ್ರ, ಜಪ ಹೋಮ ತರ್ಪಣ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ADVERTISEMENT

ಬಜರಂಗದಳದ ಮುಖಂಡ ದಿನೇಶ್‌ ಮೆಂಡನ್‌, ವಿಎಚ್‌ಪಿ ಮುಖಂಡ ಕುಮಾರ್‌ ಸಿಂಧುವಾಲ, ಕಾರ್ಯದರ್ಶಿ ಪ್ರಮೋದ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.