ADVERTISEMENT

ಸಾಧಿಸಲು ಸಮರ್ಪಣಾಭಾವ ಅಗತ್ಯ: ರೆಮೋನಾ ಇವೆಟ್ ಪಿರೇರಾ

ತೊಟ್ಟಂ ಸಂತ ಅನ್ನಮ್ಮ ಚರ್ಚ್‌ನಲ್ಲಿ ಹೆಣ್ಣು ಮಕ್ಕಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 5:05 IST
Last Updated 23 ಸೆಪ್ಟೆಂಬರ್ 2025, 5:05 IST
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ ಕಲಾವಿದೆ ರೆಮೋನಾ ಇವೆಟ್ ಪಿರೇರಾ ಅವರನ್ನು ಸನ್ಮಾನ ಮಾಡಲಾಯಿತು
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ ಕಲಾವಿದೆ ರೆಮೋನಾ ಇವೆಟ್ ಪಿರೇರಾ ಅವರನ್ನು ಸನ್ಮಾನ ಮಾಡಲಾಯಿತು   

ಉಡುಪಿ: ನಮ್ಮಲ್ಲಿ ಆಸಕ್ತಿ ಮತ್ತು ಸಮರ್ಪಣಾ ಭಾವ ಇದ್ದಾಗ ಯಾವುದೇ ಅಡೆತಡೆಗಳನ್ನು ಎದುರಿಸಿ ಸಾಧನೆಯ ಶಿಖರವನ್ನು ಏರಲು ಸಾಧ್ಯವಿದೆ ಎಂದು 170 ತಾಸು ಭರತನಾಟ್ಯ ಪ್ರದರ್ಶನ ನೀಡಿ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ ಕಲಾವಿದೆ ರೆಮೋನಾ ಇವೆಟ್ ಪಿರೇರಾ ಹೇಳಿದರು.

ತೊಟ್ಟಂ ಸಂತ ಅನ್ನಮ್ಮ ಚರ್ಚ್‌ನಲ್ಲಿ ಮಹಿಳಾ ಆಯೋಗ ಹಾಗೂ ಸ್ತ್ರೀ ಸಂಘಟನೆ ಭಾನುವಾರ ಆಯೋಜಿಸಿದ್ದ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬರಲ್ಲೂ ವಿಶೇಷವಾದ ಪ್ರತಿಭೆಗಳಿದ್ದು ಅದಕ್ಕೆ ಹೆತ್ತವರ ಹಾಗೂ ಸಮಾಜದ ಪ್ರೋತ್ಸಾಹ ಲಭಿಸಿದಾಗ ಸಾಧನೆ ಮಾಡಲು ಉತ್ಸಾಹ ಬರುತ್ತದೆ. ಹೆಣ್ಣು ಮಕ್ಕಳಿಗೆ ಕಠಿಣವಾದ ಸಾಧನೆಗಳನ್ನು ಮಾಡುವಾಗ ಸಮಾಜದಿಂದ ಪ್ರೋತ್ಸಾಹದ ಜೊತೆಗೆ ಟೀಕೆಗಳು ಬರುವುದು ಸಹಜ. ಆದರೆ, ಅದರ ಬಗ್ಗೆ ಹೆಚ್ಚಿನ ತಲೆಕೆಡಿಸಿಕೊಳ್ಳದೆ ಸಾಧನೆ ಮಾಡಬೇಕು ಎಂದರು.

ADVERTISEMENT

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚರ್ಚ್‌ನ ಧರ್ಮಗುರು ಡೆನಿಸ್ ಡೆಸಾ ಮಾತನಾಡಿ, ಹೆಣ್ಣು ಅಬಲೆಯಲ್ಲ ಬದಲು ಸಬಲೆ ಎನ್ನುವುದು ಈಗಾಗಲೇ ತಮ್ಮ ಸಾಧನೆಗಳ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷ ಲೆಸ್ಲಿ ಆರೋಜಾ ಶುಭ ಹಾರೈಸಿದರು. ಚರ್ಚ್‌ನ ವತಿಯಿಂದ ರೆಮೋನಾ ಇವೆಟ್ ಪಿರೇರಾ ಅವರನ್ನು ಸನ್ಮಾನಿಸಲಾಯಿತು.

ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸ್ಥಳೀಯ ಕಾನ್ವೆಂಟಿನ ಸುಪಿರೀಯರ್ ಸಿಸ್ಟರ್ ಸುಷ್ಮಾ, ಚರ್ಚ್‌ನ ಪಾಲನಾ ಮಂಡಳಿ ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಚಾಲಕಿ ವನಿತಾ ಫೆರ್ನಾಂಡಿಸ್, ರೆಮೋನಾ ಪಿರೇರಾ ತಾಯಿ ಗ್ಲ್ಯಾಡಿಸ್ ಪಿರೇರಾ, ಶರ್ಲಿನ್ ಫೆರ್ನಾಂಡಿಸ್, ಅನೋರಾ ಫೆರ್ನಾಂಡಿಸ್, ಆಗ್ನೆಲ್ ಡಿಸೋಜ ಇದ್ದರು.

ಸ್ತ್ರೀ ಸಂಘಟನೆಯ ಪ್ರಿಯಾ ರೊಡ್ರಿಗಸ್ ಸ್ವಾಗತಿಸಿದರು. ಶಾಂತಿ ಫೆರ್ನಾಂಡಿಸ್ ವಂದಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.