ADVERTISEMENT

ಎಸ್‌ಡಿಎಂಸಿ ಅಧ್ಯಕ್ಷರ ವಜಾಗೆ ಸಿಇಒಗೆ ವರದಿ ಸಲ್ಲಿಕೆ

ಉರ್ದು ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಮೇಲೆ ಹಲ್ಲೆ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 16:30 IST
Last Updated 14 ಡಿಸೆಂಬರ್ 2019, 16:30 IST

ಉಡುಪಿ: ಉಪ್ಪುಂದ ಸರ್ಕಾರಿ ಹಿರಿಯ ಉರ್ದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಎಸ್‌ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಅವರನ್ನು ವಜಾಗೊಳಿಸುವಂತೆ ಜಿಲ್ಲಾ ಪಂಚಾಯ್ತಿ ಸಿಇಒ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಶೇಷಶಯನ ಕಾರಿಂಜ ತಿಳಿಸಿದರು.‌

ಹಲ್ಲೆ ಸಂಬಂಧ ಶಿಕ್ಷಕಿ ಸಹ ಬೈಂದೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನೂ ಸಿಇಒ ಅವರಿಗೆ ಕಳುಹಿಸಲಾಗಿದೆ. ಈ ಹಿಂದೆಯೂ ಶಿಕ್ಷಕಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಮೋಹನಚಂದ್ರ ಮೇಲಿದೆ. ಘಟನೆಯ ಸಮಗ್ರ ವರದಿಯನ್ನು ಸಲ್ಲಿಸುವಂತೆ ಬಿಇಒ ಅವರಿಗೆ ಸೂಚನೆ ನೀಡಲಾಗಿದೆ ಎಂದು ಡಿಡಿಪಿಐ ತಿಳಿಸಿದರು.

ಘಟನೆಯ ವಿವರ:ಎಸ್‌ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಹಲ್ಲೆ ನಡೆಸಿದ ವಿಚಾರವನ್ನು ಶಿಕ್ಷಕಿ ಈಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಸ್ಪಂದಿಸಿದ ಸಚಿವರು ಹಲ್ಲೆಮಾಡಿದ ವ್ಯಕ್ತಿಯನ್ನು ವಜಾಗೊಳಿಸಿ, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಹಾಗೂ ಎಸ್‌ಪಿ ಅವರಿಗೆ ಸೂಚನೆ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.