
ಕಾರ್ಕಳ: ‘ಭಾರತ ಸರ್ವ ಕ್ಷೇತ್ರದಲ್ಲೂ ಬಲಿಷ್ಠವಾಗಲು ಒಗ್ಗಟ್ಟಿನ ಮಂತ್ರ ಅಗತ್ಯವಾಗಿದೆ’ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಸಹಯೋಗ ವಿಭಾಗದ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್ ಹೇಳಿದರು.
ತಾಲ್ಲೂಕಿನ ನಿಟ್ಟೆ ವಿದ್ಯಾಸಂಸ್ಥೆಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಯೋಗೀಶ್ ಹೆಗ್ಡೆ, ಪ್ರಾಂಶುಪಾಲ ಭಾಗವಹಿಸಿದ್ದರು. ನಿಟ್ಟೆ ಎನ್.ಎಸ್.ಎ.ಎಂ. ಶಾಲೆಯ ಆರ್ಮಿ ಎನ್.ಸಿ.ಸಿ ಘಟಕ, ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ನೇವಲ್ ಘಟಕ, ಕಾಲೇಜು ಕ್ಯಾಂಪಸ್‌ನ ಭಗ್ರತಾ ಸಿಬ್ಬಂದಿ ಪಥಸಂಚಲನ ನಡೆಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಎನ್. ಚಿಪ್ಳೂಣ್ಕರ್ ಸ್ವಾಗತಿಸಿದರು. ರಸಾಯನವಿಜ್ಞಾನ ವಿಭಾಗ ಸಹ ಪ್ರಾಧ್ಯಾಪಕ ಶಿವಪ್ರಸಾದ್ ಶೆಟ್ಟಿ ವಂದಿಸಿದರು. ಎನ್‌ಸಿಸಿ ಸಂಯೋಜಕಿ ಉಷಾ ನಿರೂಪಿಸಿದರು.
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಗಣರಾಜ್ಯೋತ್ಸವದಲ್ಲಿ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಧ್ವಜಾರೋಹಣ ನೆರವೇರಿಸಿದರು. ವಾಸ್ತುಶಿಲ್ಪಿ ಪ್ರೊ.ವಸಂತ ಭಟ್, ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್, ವಾಸ್ತುಶಿಲ್ಪಿ ಸುನಿಲ್ ಕುಮಾರ್ ಭಾಗವಹಿಸಿದ್ದರು. ಇಂಗ್ಲಿಷ್ ಉಪನ್ಯಾಸಕಿ ಪವಿತ್ರಾ ನಿರೂಪಿಸಿದರು.
ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಉದ್ಯಮಿ ವಿವೇಕಾನಂದ ಶೆಣೈ ಧ್ವಜಾರೋಹಣ ಮಾಡಿದರು. ವಿದ್ಯಾರ್ಥಿನಿ ದಿಯಾ ಶೆಟ್ಟಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ರಮಿತಾ ಶೆಟ್ಟಿ ಗಣರಾಜ್ಯೋತ್ಸವ ಬಗ್ಗೆ ಮಾತನಾಡಿದರು. ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಂಶುಪಾಲ ಪ್ರಕಾಶ್ ಭಟ್, ಮುಖ್ಯಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಜೋತ್ಸ್ನಾ ಸ್ನೇಹಲತಾ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಆಪ್ತ ಸಮಾಲೋಚಕಿ ಡಾ.ಸಿ. ಶಾಲೆಟ್ ಸೀಕ್ವೆರ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತ ಭಾಗವಹಿಸಿದ್ದರು. ಶಿಕ್ಷಕಿ ವಿಜೇತಾ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.