ಉಡುಪಿ: ದ್ವೀಪಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಸೇಂಟ್ ಮೇರೀಸ್ ದ್ವೀಪದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸೇಂಟ್ ಮೇರೀಸ್ ಸೇರಿದಂತೆ ರಾಜ್ಯದಲ್ಲಿರುವ 116 ದ್ವೀಪಗಳೂ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಅಪಾರ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಇಂತಹ ದ್ವೀಪಗಳನ್ನು ಬಳಸಿಕೊಳ್ಳಲು ವಿಫಲರಾಗಿದ್ದೇವೆ ಎಂದರು.
ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿದ್ದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಸಲು ನಾವು ಹೆಜ್ಜೆ ಇಟ್ಟಿದ್ದೇವೆ ಎಂದೂ ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪಾ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.