ADVERTISEMENT

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ನಾಲ್ವರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 13:06 IST
Last Updated 23 ಸೆಪ್ಟೆಂಬರ್ 2021, 13:06 IST
ಮಲ್ಪೆ ಬೀಚ್‌
ಮಲ್ಪೆ ಬೀಚ್‌   

ಉಡುಪಿ: ಮಲ್ಪೆ ಬೀಚ್‌ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಪ್ರವಾಸಿಗರನ್ನು ಗುರುವಾರ ಲೈಫ್‌ ಗಾರ್ಡ್ಸ್‌ ರಕ್ಷಣೆ ಮಾಡಿದ್ದಾರೆ.

ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19), ಅನಿಲ್ ಕುಮಾರ್ (21) ಹಾಗೂ ಮಂಡ್ಯ ಜಿಲ್ಲೆಯ ನೆರೆಕೆರೆಯ ನಿತಿನ್ (18) ಪ್ರಾಣಾಪಾಯದಿಂದ ಪಾರಾದವರು.

ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಹೆಚ್ಚು ಆಳಕ್ಕೆ ಇಳಿಯದಂತೆ ಲೈಫ್‌ಗಾರ್ಡ್ಸ್‌ ಸೂಚನೆ ನೀಡಿದರೂ ನಿರ್ಲಕ್ಷ್ಯದಿಂದ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು ಎಂದು ಬೀಚ್‌ ಸಿಬ್ಬಂದಿ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.