ಬೈಂದೂರು: ತಾಲ್ಲೂಕಿನ ಎಲ್ಲೂರು–ಯರುಕೋಣೆಯ ನಡುವಿನ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದರ ವಿರುದ್ಧ ಶಾಸಕ ಗುರುರಾಜ್ ಗಂಟಿಹೊಳೆ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ.
ಈ ಕುರಿತು ಮಾತನಾಡಿರುವ ಶಾಸಕರು, ಕುಂಟು ನೆಪವೊಡ್ಡಿ ಬಸ್ ಸಂಚಾರವನ್ನು ನಿಲ್ಲಿಸಿದ್ದರು. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗುತ್ತಿತ್ತು. ಬಸ್ ಸ್ಥಗಿತಗೊಳಿಸಿರುವುದರ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳೊಂದಿಗೆ ಮಾತಾಡಿ, ಯಾವುದೇ ಕಾರಣಕ್ಕೂ ಬಸ್ ಸಂಚಾರ ಸ್ಥಗಿತಮಾಡಬಾರದು ಎಂದು ಸೂಚನೆ ನೀಡಲಾಗಿತ್ತು ಎಂದು ಮಾಹಿತಿ ನೀಡಿದರು.
ಶಾಸಕರ ಸೂಚನೆಯ ಬೆನ್ನಲ್ಲೇ ಸರ್ಕಾರಿ ಬಸ್ ಸಂಚಾರ ಮತ್ತೆ ಆರಂಭಗೊಂಡಿದ್ದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.