ADVERTISEMENT

ಉಡುಪಿ | ದ್ವೇಷ ಭಾಷಣ ಪ್ರಕರಣ: ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 8:30 IST
Last Updated 10 ಅಕ್ಟೋಬರ್ 2025, 8:30 IST
<div class="paragraphs"><p>ರಿಯಾಜ್ ಕಡಂಬು</p></div>

ರಿಯಾಜ್ ಕಡಂಬು

   

ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪದಲ್ಲಿ ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದ್ವೇಷ ಭಾಷಣ ಆರೋಪದಲ್ಲಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿತ್ತು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿ ಅವರು ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು.

ಜಾಮೀನು ಷರತ್ತು ಉಲ್ಲಂಘಿಸಿದ್ದಕ್ಕೆ ಪೊಲೀಸರು ರಿಯಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.