ಪಡುಬಿದ್ರಿ: ಪಂಚಾಯಿತಿಯ 5ನೇ ವಾರ್ಡ್‌ನಲ್ಲಿ ₹ 1.10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ 3 ರಸ್ತೆಗಳನ್ನು ಶಾಸಕ ಲಾಲಾಜಿ ಆರ್.ಮೆಂಡನ್ ಈಚೆಗೆ ಲೋಕಾರ್ಪಣೆಗೊಳಿಸಿದರು.
ಪಂಚಾಯಿತಿ ವ್ಯಾಪ್ತಿಯ ಉಳಿದ ವಾರ್ಡ್‌ಗಳಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಪಡುಬಿದ್ರಿ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಂದ್ರ ಪೂಜಾರಿ, ವಿನಾಯಕ್ ಪುತ್ರನ್, ಅಶೋಕ್ ಪೂಜಾರಿ, ಮುಖಂಡರಾದ ಜಗದೀಶ್ ಮುರುಡಿ, ರಾಜೇಂದ್ರ ಪ್ರಭು, ಲಕ್ಷ್ಮಣ್ ಪೂಜಾರಿ, ಸುಧಾ ಪೂಜಾರಿ, ಅಪ್ಪು ಪೂಜಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.