ADVERTISEMENT

ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಂಘ ಸಂಸ್ಥೆ ಸಹಕಾರಿ: ಬಿ.ಎಂ.ಭಟ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2023, 12:33 IST
Last Updated 25 ಆಗಸ್ಟ್ 2023, 12:33 IST
ಸಾಯಿಬ್ರಕಟ್ಟೆ ರೋಟರಿ ಕ್ಲಬ್ ವತಿಯಿಂದ ಜಾನುವಾರು ಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರ್‍ಯಾಕ್ಟ್‌ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು
ಸಾಯಿಬ್ರಕಟ್ಟೆ ರೋಟರಿ ಕ್ಲಬ್ ವತಿಯಿಂದ ಜಾನುವಾರು ಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರ್‍ಯಾಕ್ಟ್‌ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು   

ಬ್ರಹ್ಮಾವರ: ಸಾಯಿಬ್ರಕಟ್ಟೆ ರೋಟರಿ ಕ್ಲಬ್ ವತಿಯಿಂದ ಜಾನುವಾರುಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರ್‍ಯಾಕ್ಟ್‌ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಪದಪ್ರದಾನ ಅಧಿಕಾರಿ ರೋಟರಿ ಜಿಲ್ಲಾ 3182ರ ಇಂಟರ್‍ಯಾಕ್ಟ್‌ ಚೇರ್ಮನ್ ಬಿ.ಎಂ.ಭಟ್ ಪದಗ್ರಹಣ ನೆರವೇರಿಸಿ, ‘ಇಂಟರ್‍ಯಾಕ್ಟ್‌ ಕ್ಲಬ್‌ಗಳು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ನಾಯಕತ್ವ ಗುಣ ಬೆಳೆಸಿಕೊಳ್ಳಲು ಹಾಗೂ ಸೇವಾ ಮನೋಭಾವ ಹೊಂದಲು ಸಹಕಾರಿ ಆಗುತ್ತದೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿನಿ ಇಂಟರ್‍ಯಾಕ್ಟ್‌ ಕ್ಲಬ್‌ ಅಧ್ಯಕ್ಷೆ ಅನನ್ಯ ಅವರಿಗೆ ಕೊರಳಲಾಂಛನ ತೊಡಿಸಿ ಪದಪ್ರದಾನ ನೆರವೇರಿಸಿದರು. ಕಾರ್ಯದರ್ಶಿ ಶ್ರೀಧರ ಅಧಿಕಾರ ವಹಿಸಿಕೊಂಡರು.

ADVERTISEMENT

2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರೋಟರಿ ಮತ್ತು ಇಂಟರ್‍ಯಾಕ್ಟ್‌ ಕ್ಲಬ್‌ಗಳ ಸಹಭಾಗಿತ್ವದಲ್ಲಿ ನೀಡಿದ್ದಲ್ಲದೆ ಎಲ್ಲ ವಿದ್ಯಾರ್ಥಿಗಳಿಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಾಯಿಬ್ರಕಟ್ಟೆ ರೋಟರಿ ಕ್ಲಬ್‌ ಅಧ್ಯಕ್ಷೆ ಯಶಸ್ವಿನಿ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ವಲಯ ಸೇನಾನಿ ವಿಜಯ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಅಣ್ಣಯ್ಯದಾಸ್, ಇಂಟರ್‍ಯಾಕ್ಟ್‌ ಟೀಚರ್ಸ್ ಕೋಆರ್ಡಿನೆಟರ್ ಆನಂದ ಎಂ, ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ನಾಯಕ್ ಇದ್ದರು.

ಕ್ಲಬ್‌ನ ಮಾಜಿ ಅಧ್ಯಕ್ಷ ಪ್ರಸಾದ್ ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಅಲ್ತಾರು ಗೌತಮ ಹೆಗ್ಡೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.