ADVERTISEMENT

ಆತ್ಮನಿರ್ಭರ ಭಾರತ ಪರಿಕಲ್ಪನೆ ಸಾಕಾರವಾಗಲಿ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 15:22 IST
Last Updated 2 ಮಾರ್ಚ್ 2021, 15:22 IST
ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ್ ಮೋಹನ್ ಭಾಗವತ್ ಭೇಟಿನೀಡಿ ಸಮಾಲೋಚನೆ ನಡೆಸಿದರು.
ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ್ ಮೋಹನ್ ಭಾಗವತ್ ಭೇಟಿನೀಡಿ ಸಮಾಲೋಚನೆ ನಡೆಸಿದರು.   

ಉಡುಪಿ: ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಆತ್ಮನಿರ್ಭರ ಭಾರತದತ್ತ ದಿಟ್ಟ ಹೆಜ್ಜೆಯನ್ನಿಟ್ಟಿದ್ದು ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.

ಸೋಮವಾರ ಹಾಗೂ ಮಂಗಳವಾರ ಮಾಹೆ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಭೇಟಿನೀಡಿ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಅವರು, ‘ಉನ್ನತ ಶಿಕ್ಷಣ, ಆರೋಗ್ಯ, ಸಂಶೋಧನಾ ಕ್ಷೇತ್ರ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮಾಹೆ ಸಂಸ್ಥೆ ಹೆಚ್ಚಿನ ಒತ್ತು ನೀಡಿರುವುದು ಸ್ವಾಗತಾರ್ಹ. ಭಾರತೀಯ ಶಿಕ್ಷಣ ಪದ್ಧತಿಯ ಬುನಾದಿಯನ್ನು ಸದೃಢಗೊಳಿಸಲು ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿರುವುದು ಅಭಿನಂದನೀಯ ಎಂದು ಶ್ಲಾಘಿಸಿದರು.

ಆತ್ಮನಿರ್ಭರ ಭಾರತ ಪರಿಕಲ್ಪನೆ ದೇಶದಾದ್ಯಂತ ಅನುಷ್ಠಾನವಾಗಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ, ಗುರು–ಹಿರಿಯರಿಗೆ ಗೌರವ ನೀಡುವ, ಸದ್ವಿಚಾರಗಳನ್ನು ತಿಳಿಸುವ ಕಾರ್ಯ ನಡೆಯಬೇಕು. ಮಾಹೆ ವಿವಿಯಲ್ಲಿ ಈ ಎಲ್ಲ ಅಂಶಗಳನ್ನು ಕಾಣಬಹುದಾಗಿದ್ದು, ಮಾದರಿಯಾಗಿದೆ ಎಂದರು.

ADVERTISEMENT

ಅನಾಟಮಿ ಹಾಗೂ ಪೆಥಾಲಜಿ ಮ್ಯೂಸಿಯಂಗೆ ಭೇಟಿನೀಡಿದ ಮೋಹನ್ ಭಾಗವತ್‌ ‘ಮ್ಯಾಪ್‌’ ಡಿಜಿಟಲೀಕರಣಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾಹೆ ಟ್ರಸ್ಟ್‌ ಅಧ್ಯಕ್ಷ ಡಾ.ರಂಜನ್ ಪೈ, ಮಾಹೆ ಸಹ ಕುಲಾಧಿಪತಿ ಡಾ.ಎಚ್‌.ಎಸ್.ಬಲ್ಲಾಳ್‌, ಕುಲಪತಿ ಡಾ.ಎಂ.ಡಿ.ವೆಂಕಟೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.