ADVERTISEMENT

ಆರ್‌ಎಸ್ಎಸ್‌ ಧ್ಯೇಯೋದ್ದೇಶ ಸಕಾರಾತ್ಮಕ: ಪುತ್ತಿಗೆ ಶ್ರೀ

ಪುತ್ತಿಗೆ ಶ್ರೀಗಳಿಂದ ದತ್ತಾತ್ರೇಯ ಹೊಸಬಾಳೆಗೆ ಅನುಗ್ರಹ ಮಂತ್ರಾಕ್ಷತೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 4:39 IST
Last Updated 16 ಅಕ್ಟೋಬರ್ 2025, 4:39 IST
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ದತ್ತಾತ್ರೇಯ ಹೊಸಬಾಳೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ನೀಡಿದರು
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ದತ್ತಾತ್ರೇಯ ಹೊಸಬಾಳೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ನೀಡಿದರು   

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್ಎಸ್) ದೇಶಸೇವೆಯ ಕಾರ್ಯದಲ್ಲಿ ಶತಮಾನ ಕಂಡಿರುವುದು ಸಂತರಾದ ನಮಗೂ ಸಂತಸ ತಂದಿದೆ. ಹಿಂದುತ್ವದ ರಕ್ಷಣೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಅದರ ನಿಸ್ವಾರ್ಥ ಸೇವೆಯಿಂದ ವಿಶ್ವದಲ್ಲಿ ಭಾರತ ರಾಷ್ಟ್ರ ಇನ್ನಷ್ಟು ಬೆಳಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಆರ್‌ಎಸ್ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರಿಗೆ ಶ್ರೀಕೃಷ್ಣ, ಮುಖ್ಯಪ್ರಾಣ ದೇವರ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಅವರು ಆಶೀರ್ವಚನ ನೀಡಿದರು.

ಸಾಧನೆಯ ಮಾರ್ಗದಲ್ಲಿ ಸಾಗುತ್ತಿರುವಾಗ ಅಥವಾ ಕೈಗೊಳ್ಳುವ ಕಾರ್ಯಗಳೆಲ್ಲವೂ ಸಾಧನೆಯಾದಾಗ ಟೀಕೆ ಟಿಪ್ಪಣಿಗಳು ಎದುರಾಗುವುದು ಸಹಜ. ಆ ಕುರಿತಾಗಿ ತಲೆಕೆಡಿಸಿಕೊಳ್ಳಬಾರದು. ಆರ್‌ಎಸ್ಎಸ್‌ನ ಧ್ಯೇಯೋದ್ದೇಶ ಎಂದಿಗೂ ಸಕಾರಾತ್ಮಕವಾಗಿಯೇ ಇದೆ ಎಂದರು.

ADVERTISEMENT

ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಯಾವುದೇ ಪ್ರಚಾರ ಬಯಸದೆ, ಫಲಾಪೇಕ್ಷೆ ಇಲ್ಲದೆ ನೊಂದವರ ಸೇವೆ ಮಾಡುವುದನ್ನು ಕಂಡಿದ್ದೇವೆ. ಆರ್‌ಎಸ್ಎಸ್ ಮೂಲಕ ಎಲ್ಲ ಕುಟುಂಬಗಳಲ್ಲೂ ಸಂಸ್ಕಾರ ವೃದ್ಧಿಸಲಿ. ರಾಷ್ಟ್ರೀಯ ಹಿತಾಸಕ್ತಿ ಜಾಗೃತವಾಗಲಿ ಎಂದು ಹೇಳಿದದರು.

ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಪಾದರು ಹೊಸಬಾಳೆ ಅವರಿಗೆ ಅನುಗ್ರಹಿಸಿದರು. ಉಡುಪಿ ಮಟ್ಟು ಲಕ್ಷ್ಮೀನಾರಾಯಣ ಆಚಾರ್ಯ ಉಪಸ್ಥಿತರಿದ್ದರು. ಹೊಸಬಾಳೆ ಅವರು ಇದೇ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳಿಂದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದರು.

ಶ್ರೀಗಳ ಭೇಟಿಗೂ ಮುನ್ನ ದತ್ತಾತ್ರೇಯ ಹೊಸಬಾಳೆ ಅವರನ್ನು ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಸ್ವಾಗತಿಸಲಾಯಿತು. ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಮಠದ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು.

ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದ ಹೊಸಬಾಳೆ | ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಸ್ವಾಗತ
ಹಿಂದುಗಳಲ್ಲಿ ಧಾರ್ಮಿಕ ಪ್ರಜ್ಞೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕೋಟಿ ಗೀತಾ ಲೇಖನ ಯಜ್ಞದ ಮೂಲಕ ಪುತ್ತಿಗೆ ಶ್ರೀಗಳು ಜನರಲ್ಲಿ ಧಾರ್ಮಿಕ ಹಾಗೂ ದೇವರ ಭಾವವನ್ನು ಜಾಗೃತಗೊಳಿಸುತ್ತಿದ್ದಾರೆ
ದತ್ತಾತ್ರೇಯ ಹೊಸಬಾಳೆ ಆರ್‌ಎಸ್ಎಸ್‌ ಸರಕಾರ್ಯವಾಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.