ಕಾರ್ಕಳ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್, ಜಿಲ್ಲಾ ಪಂಚಾಯಿತಿ ಉಡುಪಿ, ತಾಲ್ಲೂಕು ಪಂಚಾಯಿತಿ ಕಾರ್ಕಳ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ‘ಸಫಾಯಿ ಮಿತ್ರ ಸುರಕ್ಷಾ ಶಿಬಿರ’ ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಂದ ಉದ್ಘಾಟಿಸಿದರು. ಸ್ವಚ್ಛತಾ ಕಾರ್ಯಕರ್ತರಿಗೆ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಸ್ವಚ್ಛತಾ ಕಾರ್ಯಕರ್ತರನ್ನು ಗೌರವಿಸಿ, ಅರ್ಹತಾ ಪತ್ರ ವಿತರಿಸಲಾಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಂದ್ರನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಶಾಂತ್ ಕುಡ್ವ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಮೇಶ್, ವ್ಯವಸ್ಥಾಪಕ ಹರೀಶ್ ಇದ್ದರು. ಪಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಪ್ರಮೀಳಾ, ಡಿಎಚ್ಇಒ ಶಶಿಧರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಸ್ವಚ್ಛ ಭಾರತ್ ಸಂಯೋಜಕಿ ರೆನಿಟಾ, ರಘನಾಥ್ ಹಾಗೂ ಪ್ರದೀಪ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.