ಪಡುಬಿದ್ರಿ: ಅಡ್ವೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಈಚೆಗೆ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ನವೀನ್‌ಚಂದ್ರ ಎಸ್. ಸುವರ್ಣ, ಸಹಕಾರಿ ಸಂಸ್ಥೆ ಅತ್ಯುತ್ತಮವಾಗಿ ವ್ಯವಹಾರ ನಡೆಸುತ್ತಿದ್ದು, ಸದಸ್ಯರಿಗೆ ಶೇ15 ಡಿವಿಡೆಂಡ್ ನೀಡುವುದಾಗಿ ಘೋಷಣೆ ಮಾಡಿದರು.
ಸಹಕಾರಿಯ 11 ವರ್ಷಗಳ ಅವಧಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಾಧಿಸಿದ ಪ್ರಗತಿಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ರಜತ ಮಹೋತ್ಸವ ಸಮಾರಂಭದಲ್ಲಿ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದರು.
ಈ ಸಂದರ್ಭ ಅಧ್ಯಕ್ಷ ನವೀನ್‌ಚಂದ್ರ ಎಸ್. ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಸಹಕಾರಿಯ ಸದಸ್ಯರ 25 ಪ್ರತಿಭಾನ್ವಿತ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಶಿಕ್ಷಕರ ದಿನಾಚರಣೆ ಸಲುವಾಗಿ ಸಹಕಾರಿಯ ಸದಸ್ಯ ಶಿಕ್ಷಕರಿಗೆ ಗೌರವಿಸಲಾಯಿತು.
ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಿಕಾ ಪಿ. ಪೂಜಾರಿ, ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕರಾದ ಸುಂದರ ಯು. ಸುವರ್ಣ, ಶ್ರೀ ಗುರುಪ್ರಸಾದ್ ಆಚಾರ್ಯ, ವಾಸುದೇವ ಕೆ. ಎಸ್, ಅಲ್ಬರ್ಟ್ ಡೈನಿ ಕುಟಿನ್ಹೊ, ಅನಿತ ಫ್ರಾನ್ಸಿಸ್ ಡಿಸೋಜ, ಪೀಟರ್ ಫೆಲಿಕ್ಸ್ ಡಿಸೋಜ, ಫ್ರಾನ್ಸಿಸ್ ಡಿಸೋಜ, ವಕೀಲ ಶಾರ್ಲೆಟ್ ಪುರ್ಟಾಡೊ ಮತ್ತು ಸಿಬ್ಬಂದಿ ಇದ್ದರು.
ಸಹಕಾರಿಯ ಉಪಾಧ್ಯಕ್ಷ ಜಿತೇಂದ್ರ ಪುರ್ಟಾಡೊ ಸ್ವಾಗತಿಸಿದರು. ಶರತ್ ಕುಮಾರ್ ಅಡ್ವೆ ನಿರೂಪಿಸಿದರು. ನಿರ್ದೇಶಕ ಸುನಿಲ್ ಕುಮಾರ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.