ಬ್ರಹ್ಮಾವರ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್, ಸ್ವಚ್ಛ ಸರ್ವೇಕ್ಷಣಕ್ಕೆ ಸಂಬಂಧಿಸಿದಂತೆ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಶ್ರೀಪತಿ ಹೇರ್ಳೆ, ಮಣೂರು ಶ್ರೀರಾಮ ಪ್ರಸಾದ ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಜಿ. ರಾಮಚಂದ್ರ ಐತಾಳ ಅವರನ್ನು ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸ್ವಚ್ಛತಾ ರಾಯಭಾರಿಯಾಗಿ ನೇಮಕ ಮಾಡಿದೆ.
ಸ್ವಚ್ಛತೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅವರು ಕೆಲಸ ನಿರ್ವಹಿಸಲಿದ್ದಾರೆ. ಸ್ವಚ್ಛತೆ, ಆರೋಗ್ಯದ ಮಹತ್ವ, ಮುಂದಿನ ದಿನಗಳಲ್ಲಿ ಸ್ವಚ್ಛತೆ ಬಗ್ಗೆ ಕೈಗೊಳ್ಳಬಹುದಾದ ಉಪಕ್ರಮಗಳ ಬಗ್ಗೆ ವಿಶೇಷ ಉಪನ್ಯಾಸಗಳನ್ನು ಸಮಯೋಚಿತವಾಗಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.