ADVERTISEMENT

‘ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಕಾಂಗ್ರೆಸ್ ಮುಖಂಡರು ಟಾರ್ಗೆಟ್‌’

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 11:07 IST
Last Updated 17 ನವೆಂಬರ್ 2020, 11:07 IST
ಸಲೀಂ ಅಹಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ
ಸಲೀಂ ಅಹಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ   

ಉಡುಪಿ: ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ರಾಜಕೀಯ ಬೆರೆಸಿ ಕಾಂಗ್ರೆಸ್‌ ಮುಖಂಡರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಆದರೆ, ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್‌ ಮುಖಂಡರನ್ನು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದರು.

ಪ್ರಕರಣದಲ್ಲಿ ಬಂಧಿತರಾಗಿರುವ 500 ಆರೋಪಿಗಳ ಪೈಕಿ ಕೃತ್ಯದಲ್ಲಿ ಭಾಗಿಯಾಗದವರೂ ಇದ್ದಾರೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಬಿಜೆಪಿ ನಾಯಕರು ಪ್ರಕರಣದಲ್ಲಿ ಅನಗತ್ಯ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಪರವಾಗಿ ಪಕ್ಷ ನಿಂತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.