ADVERTISEMENT

ಮೋಹನ್ ಆಳ್ವಾಗೆ ವಿಶ್ವಪ್ರತಿಭಾ ಪುರಸ್ಕಾರ

ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಮಾಡುವ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 11:00 IST
Last Updated 6 ಮಾರ್ಚ್ 2021, 11:00 IST
ಡಾ.ಮೋಹನ್ ಆಳ್ವ
ಡಾ.ಮೋಹನ್ ಆಳ್ವ   

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಮಾಡುವ ‘ವಿಶ್ವಪ್ರತಿಭಾ ಪುರಸ್ಕಾರ’ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ಪ್ರತಿಷ್ಠಾನದ ಮುಖ್ಯಸ್ಥ ಡಾ.ಮೋಹನ್ ಆಳ್ವ ಅವರಿಗೆ ನೀಡಲಾಗುವುದು ಎಂದು ಸಂಸ್ಥೆಯ ಉಪಾಧ್ಯಕ್ಷ ಮರವಂತೆ ನಾಗರಾಜ್ ಹೆಬ್ಬಾರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಮೋಹನ್ ಆಳ್ವ ಅವರನ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿರಲಿದೆ. ಏ. 3 ಹಾಗೂ 4ರಂದು ಉಡುಪಿಯಲ್ಲಿ ನಡೆಯುವ ಪ್ರತಿಷ್ಠಾನದ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ವಿವರ ನೀಡಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಸ್ಥೆಯ ಸ್ಥಾಪಕರು ಹಾಗೂ ಗೌರವಾಧ್ಯಕ್ಷರಾದ ವಿಶ್ವನಾಥ್ ಶೆಣೈ ಅವರು ಪತ್ನಿಯ ಹೆಸರಿನಲ್ಲಿ ‘ವಿಶ್ವಪ್ರಭಾ ಪುರಸ್ಕಾರ’ ನೀಡುತ್ತಿದ್ದಾರೆ ಎಂದರು.

ADVERTISEMENT

ಸಂಸ್ಕೃತಿ ವಿಶ್ವ ಪ್ರತಿಷ್ಠಾನವು ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡು ಸಾಹಿತ್ಯ ಸಂಗೀತ, ಕಲೆ, ಸಾಕ್ಷ್ಯಚಿತ್ರ, ನಾಟಕ, ನೃತ್ಯ, ಲಲಿತ ಕಲೆಗಳ ಪ್ರದರ್ಶನ ಸೇರಿದಂತೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಲಾಕ್‌ಡೌನ್ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಆಯೋಜಿಸಿದ್ದ ನವರಸ ಮಾಲಿಕೆ, ಕಥಾ ಸಪ್ತಾಹ, ಸಾಕ್ಷ್ಯಚಿತ್ರಗಳನ್ನು 5 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಸಂಚಾಲಕ ಎಚ್‌.ಪಿ.ರವಿರಾಜ್, ಸಂಧ್ಯಾ ಶೆಣೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.