ADVERTISEMENT

ಮರಳು ದಂಧೆ: ಆರೋಪಿಗಳ ವಿರುದ್ಧ ಪ್ರಕರಣ

ಇಬ್ಬರು ಅಧಿಕಾರಿಗಳ ಅಮಾನತಿಗೆ ಶಿಫಾರಸು: ಡಿಸಿ ಜಗದೀಶ್‌

​ಪ್ರಜಾವಾಣಿ ವಾರ್ತೆ
Published 23 ಮೇ 2020, 14:11 IST
Last Updated 23 ಮೇ 2020, 14:11 IST
ಜಿ.ಜಗದೀಶ್
ಜಿ.ಜಗದೀಶ್   

ಉಡುಪಿ: ಸ್ವರ್ಣಾ ನದಿಯ ಪಾತ್ರದಲ್ಲಿ ಹೂಳು ತೆಗೆಯುವ ನೆಪದಲ್ಲಿ ಮರಳು ತೆಗೆ‌ದ ಆರೋಪಿಗಳ ವಿರುದ್ಧ ಖಾಸಗಿ ಪ್ರಕರಣ ದಾಖಲಾಗಿದೆ. ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಮರಳು ದಂಧೆಗೆ ಜಿಲ್ಲಾಡಳಿತ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ವರ್ಣಾ ನದಿಯಲ್ಲಿ ಈಚೆಗೆ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಸಲ್ಲಿಕೆಯಾದ ಖಾಸಗಿ ದೂರಿನ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮರಳು ದಂಧೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕುಮ್ಮಕ್ಕು ಇರುವ ಆರೋಪವಿದ್ದು ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದರು.

ಸೋಂಕಿತ ಮಕ್ಕಳ ಆರೋಗ್ಯ ಸ್ಥಿರ:ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಸೋಂಕು ತಗುಲುವ ಅಪಾಯ ಹೆಚ್ಚಾಗಿರುವ ಕಾರಣದಿಂದ ಕ್ವಾರಂಟೈನ್‌ನಲ್ಲಿರುವ ಮಕ್ಕಳು ಹಾಗೂ ಗರ್ಭಿಣಿಯರನ್ನು ಆದ್ಯತೆ ಮೇಲೆ ಪರೀಕ್ಷೆಗೊಳಪಡಿಸಿದಾಗ16 ಮಕ್ಕಳಲ್ಲಿ ಕೋವಿಡ್‌ ಸೋಂಕು ದೃಡಪಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದರು.

ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದವರ ವಿರುದ್ಧ ಈಗಾಗಲೇ ನಗರಸಭೆ ಕಾರ್ಯಾಚರಣೆ ನಡೆಸಿ ದಂಡ ಹಾಕುತ್ತಿದೆ. ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.