ADVERTISEMENT

ಸಾಣೂರು ರಾ.ಹೆ: ಸಂಸದರಿಂದ ಕಾಮಗಾರಿ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 5:40 IST
Last Updated 8 ನವೆಂಬರ್ 2025, 5:40 IST
ಕಾರ್ಕಳ ತಾಲ್ಲೂಕಿನ ಸಾಣೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಹಾದು ಹೋಗುವ ಶಾಂಭವಿ ನದಿಯ ಹೊಸ ಸೇತುವೆ ಹೆದ್ದಾರಿ ಕಾಮಗಾರಿ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಕಾರ್ಕಳ ತಾಲ್ಲೂಕಿನ ಸಾಣೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಹಾದು ಹೋಗುವ ಶಾಂಭವಿ ನದಿಯ ಹೊಸ ಸೇತುವೆ ಹೆದ್ದಾರಿ ಕಾಮಗಾರಿ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.   

ಕಾರ್ಕಳ: ತಾಲ್ಲೂಕಿನ ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಶಾಂಭವಿ ನದಿ ಹೊಸ ಸೇತುವೆ ಕಾಮಗಾರಿಯನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವೀಕ್ಷಿಸಿ ಸಮಯ ಬದ್ಧವಾಗಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂ ಸ್ವಾಧೀನ ಅಧಿಕಾರಿ ಮಹಮ್ಮದ್ ಇಸಾಕ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿವರಗಳನ್ನು ಪಡೆದ ಅವರು 3 ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಪರಿಹಾರ ವಿತರಿಸಲು ತಿಳಿಸಿದರು. ಟೋಲ್ ಸಂಗ್ರಹಕ್ಕೆ ಪ್ರಾರಂಭಿಸಿದ ಬಳಿಕ ಸಾಣೂರಿನಿಂದ ಬಿಕರ್ನಕಟ್ಟೆಯ ತನಕ ಏಕಕಾಲದಲ್ಲಿ ಬೀದಿ ದೀಪಗಳ ವ್ಯವಸ್ಥೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

5 ಎಕರೆಯಷ್ಟು ಜಮೀನನ್ನು ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆಂದು ಭೂಸ್ವಾಧೀನಗೊಳಿಸಿರುವ ಕುರಿತು ಸಾರ್ವಜನಿಕರು ಹೆದ್ದಾರಿ ಅಧಿಕಾರಿಗಳಲ್ಲಿ ಪ್ರಶ್ನಿಸಿದರು. ಗುತ್ತಿಗೆದಾರ ಕಂಪನಿ ಮತ್ತು ಹೆದ್ದಾರಿ ಇಲಾಖೆಯ ಕಾರ್ಯವೈಖರಿ ಕುರಿತು ಸಂಸದರು ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಈ ಯೋಜನೆಯ ಸಮಗ್ರ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಚಿಸಿದರು.

ADVERTISEMENT

ಸಂಸದರ ಆಪ್ತ ಕಾರ್ಯದರ್ಶಿ ರಾಘವೇಂದ್ರ, ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ ಆಶಿಕ್ ಜಿ. ಗೌಡ, ನಾಸಿರ್, ಸಾಣೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ಪಂಚಾಯಿತಿ ಸದಸ್ಯ ಸತೀಶ್ ಪೂಜಾರಿ, ವಸಂತ ಪೂಜಾರಿ, ಕರುಣಾಕರ ಕೋಟ್ಯಾನ್, ಉದ್ಯಮಿ ಗಣಪತಿ ಹೆಗ್ಡೆ, ರಾಕೇಶ್ ಅಮೀನ್, ರಾಜೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.