
ಪ್ರಜಾವಾಣಿ ವಾರ್ತೆ
ಉಡುಪಿ: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಗುರುವಾರ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿದ್ದು ಹೋರಾಟ ನಡೆಸಿದ ಸಾವರ್ಕರ್ ಪುತ್ಥಳಿಯನ್ನು ನಿರ್ಮಿಸಿ ಅವರಿಗೆ ಗೌರವ ಸಲ್ಲಿಸಬೇಕು. ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಸಂದರ್ಭವು ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅತ್ಯಂತ ಸಮಂಜಸ ಸಮಯವಾಗಿದ್ದು, ನಗರಸಭೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.