ADVERTISEMENT

ಉಡುಪಿ: ನಕಲಿ ದಾಖಲೆ ಸೃಷ್ಟಿಸಿ ಎಸ್‌ಬಿಐಗೆ ₹73 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 23:30 IST
Last Updated 31 ಆಗಸ್ಟ್ 2025, 23:30 IST
<div class="paragraphs"><p> ವಂಚನೆ</p></div>

ವಂಚನೆ

   

ಉಡುಪಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಮಲ್ಪೆ ಶಾಖೆಯ ವ್ಯವಸ್ಥಾಪಕ ಹಾಗೂ ಇತರರು ಸೇರಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ನ ಲಕ್ಷಾಂತರ ರೂಪಾಯಿ ದುರುಪಯೋಗ ಮಾಡಿ ವಂಚಿಸಿರುವ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌಸಿಂಗ್‌ ಫೈನಾನ್ಸ್‌ ಕಂಪನಿಯೊಂದರಿಂದ ಬಂದ ಇ–ಮೇಲ್‌ ಸಂದೇಶ ಆಧರಿಸಿ ನಾಲ್ವರ ಖಾತೆಗಳಿಗೆ ₹73 ಲಕ್ಷ ಹಣ ವರ್ಗಾವಣೆ ಮಾಡಿರುವ ಕುರಿತು ಆ.25ರಂದು ಎಸ್‌ಬಿಐ ಮುಂಬೈ ಶಾಖೆಯು ಮಲ್ಪೆ ಶಾಖೆಯ ವ್ಯವಸ್ಥಾಪಕರಲ್ಲಿ ವಿವರ ಕೇಳಿತ್ತು.

ADVERTISEMENT

ಈ ಕುರಿತು ಪರಿಶೀಲಿಸಿದಾಗ, ಮಲ್ಪೆ ಶಾಖೆಯಲ್ಲಿ ವ್ಯವಸ್ಥಾಪಕರಾಗಿದ್ದ ಮೀರಾ ಪಲ್ಲವಿ ಟಿ.ಎಚ್‌. ಅವರು ಹಾಗೂ ಹಣ ಪಡೆದ ಖಾತೆದಾರರು ಸೇರಿ ನಕಲಿ ದಾಖಲೆ ಸೃಷ್ಟಿಸಿ ಸ್ವಂತಕ್ಕೆ ಹಣ ಬಳಸಿ ಬ್ಯಾಂಕ್‌ಗೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.