ಕಾರ್ಕಳ: ಇಲ್ಲಿನ ಪೆರ್ವಾಜೆಯ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.
ಶಾಲಾ ಮುಖ್ಯಮಂತ್ರಿ ಸ್ಥಾನಕ್ಕೆ 10ನೇ ತರಗತಿಯ ನಾಲ್ಕು ಅಭ್ಯರ್ಥಿಗಳು ಕಣದಲ್ಲಿದ್ದರು. ವಿದ್ಯಾರ್ಥಿ ನಾಯಕನಾಗಿ ಕವೀಶ್ ಎ. ಅಮೀನ್ ಹಾಗೂ ವಿರೋಧ ಪಕ್ಷದ ನಾಯಕಿಯಾಗಿ ಯಶ ಜಿ. ಕೋಟ್ಯಾನ್ ಆಯ್ಕೆಯಾದರು.
ಚುನಾವಣೆಯಲ್ಲಿ ಬಳಸಿದ ಮತಯಂತ್ರವನ್ನು ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಋಷಿಕೇಶ್ ಎಟಿಎಲ್ ಸಹಕಾರದೊಂದಿಗೆ ತಯಾರಿಸಿದ್ದು ಎಲ್ಲರ ಪ್ರಶಂಸೆಗೆ ಕಾರಣವಾಯಿತು. ಮುಖ್ಯ ಶಿಕ್ಷಕ ದಿವಾಕರ್ ಮತ್ತು ಶಿಕ್ಷಕರು ಚುನಾವಣಾ ಪ್ರಕ್ರಿಯೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.