ಉಡುಪಿ: ಪ್ರಗತಿನಗರದ ಕಾರಂತ ಕಲಾಗ್ರಾಮದ ಬಳಿ ಸೋಮವಾರ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಮ್ನಿ ಅಪಘಾತಕ್ಕೀಡಾಗಿದ್ದು ಹಲವು ಮಕ್ಕಳಿಗೆ ಗಾಯಗಳಾಗಿವೆ.
ಅಪಘಾತವಾಗುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಕರ್ವಾಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓಮ್ನಿಯಲ್ಲಿ ನಿಗಧಿಗಿಂತ ಹೆಚ್ಚುಮಕ್ಕಳನ್ನು ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.