ADVERTISEMENT

ಹೆಬ್ರಿ | ವಿದ್ಯುತ್‌ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 15:21 IST
Last Updated 14 ಫೆಬ್ರುವರಿ 2024, 15:21 IST
<div class="paragraphs"><p>ಸಾವು–ಪ್ರಾತಿನಿಧಿಕ ಚಿತ್ರ</p></div>

ಸಾವು–ಪ್ರಾತಿನಿಧಿಕ ಚಿತ್ರ

   

ಹೆಬ್ರಿ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಂಡಾರಿನ ಶಯನ್ ನಾಯಕ್ (22) ಮೃತಪಟ್ಟಿದ್ದಾರೆ. ಫೆಬ್ರುವರಿ 11ರಂದು ಶಯನ್ ಅವರು ಕಾರ್ಕಳ ಭಾಗದಿಂದ ಅಂಡಾರು ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ರಾತ್ರಿ 1.20ರ ವೇಳೆ ಮರ್ಣೆ ಗ್ರಾಮದ ಕೊಂಬಗುಡ್ಡೆಯ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿತ್ತು.

ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. 13ರಂದು ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.