ADVERTISEMENT

ಮೂಳೂರು: ಕಡಲ್ಕೊರೆತ ತೀವ್ರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 7:34 IST
Last Updated 24 ಜುಲೈ 2021, 7:34 IST
ಕಾಪುವಿನ ಮೂಳೂರಿನ ತೊಟ್ಟಂನಲ್ಲಿ ಕಡಲ್ಕೊರೆತ ತೀವ್ರಗೊಂಡಿರುವುದು
ಕಾಪುವಿನ ಮೂಳೂರಿನ ತೊಟ್ಟಂನಲ್ಲಿ ಕಡಲ್ಕೊರೆತ ತೀವ್ರಗೊಂಡಿರುವುದು   

ಕಾಪು (ಪಡುಬಿದ್ರಿ): ಕಾಪು ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಪರಿಸರದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದೆ.
ಕಳೆದ ಜೂನ್ ತಿಂಗಳಲ್ಲಿ ಕಡಲ್ಕೊರೆತ ಸಂಭವಿಸಿ 30 ಕ್ಕೂ ಹೆಚ್ಚಿನ ತೆಂಗಿನ ಮರಗಳು ಸಮುದ್ರದ ಪಾಲಾಗಿದ್ದವು.

ಗುರುವಾರ ಮತ್ತೆ ಕಡಲ್ಕೊರೆತ ಹೆಚ್ಚಾಗಿದ್ದು, ಹಲವು ತೆಂಗಿನ ಮರಗಳು ಸಮುದ್ರಪಾಲಾಗಿವೆ. ಇನ್ನೂ ಕೆಲವು ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.

ಮೂರು ದಿನಗಳಿಂದ ಮೂಳೂರು ತೊಟ್ಟಂ ಪರಿಸರದಲ್ಲಿನ 2 ಕಿ. ಮೀ ಉದ್ದದ ಜನವಸತಿ ಪ್ರದೇಶದಲ್ಲಿ ಹೆಚ್ಚಿನ ಕಡಲ್ಕೊರೆತ ಕಾಣಿಸಿಕೊಳ್ಳುತ್ತಿದೆ. ಕಳೆದ ತಿಂಗಳು ಕಡಲ್ಕೊರೆತಕ್ಕೆ ಹಾಕಲಾದ ತಾತ್ಕಾಲಿಕ ತಡೆಗೋಡೆ ಸಮುದ್ರ ಪಾಲಾಗಿದೆ. ಇಲ್ಲಿ ಸಮುದ್ರ ದಡ ಮತ್ತು ಜನವಸತಿ ಪ್ರದೇಶಗಳನ್ನು ಉಳಿಸುವ ನಿಟ್ಟಿನಲ್ಲಿ ಶಾಶ್ವತ ತುರ್ತು ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.

ADVERTISEMENT

ಪಡುಬಿದ್ರಿ, ಹೆಜಮಾಡಿ, ಕಾಪು ಪರಿಸರದಲ್ಲೂ ಕಡಲು ಪ್ರಕ್ಷುಬ್ದಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.