ADVERTISEMENT

ಉಡುಪಿಗೆ ಅಭಿನಂದನ್ ಕಳುಹಿಸಿಕೊಡಿ: ರಕ್ಷಣಾ ಸಚಿವರಿಗೆ ಪಲಿಮಾರು ಶ್ರೀ ಮನವಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 11:22 IST
Last Updated 26 ಮಾರ್ಚ್ 2019, 11:22 IST
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ‌ಮಂಗಳವಾರ ಬೆಳಿಗ್ಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪಲಿಮಾರು ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ‌ಮಂಗಳವಾರ ಬೆಳಿಗ್ಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪಲಿಮಾರು ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.   

ಉಡುಪಿ:ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಬೇಕು ಎಂದು ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೇಳಿಕೊಂಡರು.

‌ಮಂಗಳವಾರ ಬೆಳಿಗ್ಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪಲಿಮಾರು ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯುವ ಸಂದರ್ಭ ಶ್ರೀಗಳು ವಿಷಯ ಪ್ರಸ್ತಾಪಿಸಿದರು.

ಅಭಿನಂದನ್ ಪರಾಕ್ರಮ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣಮಠದಲ್ಲಿ ಅವರಿಗೆ ಗೌರವಾರ್ಪಣೆ ಮಾಡುವ ಹಂಬಲ ಇದೆ. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸ್ವಾಮೀಜಿ ಕೇಳಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು,ಕಾನೂನಾತ್ಮಕ ಅಡೆ ತಡೆಗಳು ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ಈ ಸಂಬಂಧ ರಕ್ಷಣಾ ಇಲಾಖೆಗೆ ಪತ್ರ ಬರೆಯುವಂತೆ’ ತಿಳಿಸಿದರು.

‘ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು. ದೇಶ ಸುರಕ್ಷಿತರ ಕೈಯಲ್ಲಿರಬೇಕು ಎಂದು ದೇವರಲ್ಲಿ ಪ್ರಾರ್ಥಿಸುವಂತೆ’ ನಿರ್ಮಲಾ ಸೀತಾರಾಮನ್ ಅವರು ಪಲಿಮಾರು ಶ್ರೀಗಳಿಗೆ ಮನವಿ ಮಾಡಿದರು.

ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶ ಸುರಕ್ಷಿತವಾಗಿರುತ್ತದೆ. ಈ ಕಾರ್ಯಕ್ಕೆ ದೇವರ ಅನುಗ್ರಹ ಸಿಗಬೇಕು ಎಂದು ನಿವೇದಿಸಿಕೊಂಡರು.

ಒಂದು ವರ್ಷದ ಮಗುವಿದ್ದಾಗಲೇ ಉಡುಪಿಯ ಜತೆಗೆ ನಂಟಿತ್ತು. ಕೊಲ್ಲೂರು, ಕೃಷ್ಣಮಠದ ಜೊತೆಯೂ ನಿರಂತರ ಸಂಪರ್ಕ ಇತ್ತು.ಮುಂದಿನ ಮಠದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.