
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಕಾರ್ಕಳ: ತಾಲ್ಲೂಕಿನ ಗ್ರಾಮವೊಂದರಲ್ಲಿ ವಿದ್ಯಾರ್ಥಿನಿಯ ಮೇಲೆ ರಿಕ್ಷಾ ಚಾಲಕ ಅಮರನಾಥ್ ಪೂಜಾರಿ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದು, ಆತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯು ತರಗತಿ ಮುಗಿಸಿ ತೆರಳುತ್ತಿದ್ದ ವೇಳೆ ಮನೆಗೆ ಬಿಡುವುದಾಗಿ ನಂಬಿಸಿ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.