ADVERTISEMENT

ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 15:50 IST
Last Updated 19 ಏಪ್ರಿಲ್ 2021, 15:50 IST

ಉಡುಪಿ: ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಾಗಿದೆ. ಮಠದ ಹಿರಿಯ ಯತಿಗಳಾಗಿದ್ದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಮೃತಪಟ್ಟು 2 ವರ್ಷ 9 ತಿಂಗಳ ಬಳಿಕ ಮಠಕ್ಕೆ ಉತ್ತರಾಧಿಕಾರಿಯ ನೇಮಕ ನಡೆಯುತ್ತಿದೆ.

ನೂತನ ಮಠಾಧಿಪತಿಯ ಪರಿಚಯ ಹಾಗೂ ಪಟ್ಟಾಭಿಷೇಕದ ಕುರಿತು ಏ.21ರಂದು ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ ಮಾಹಿತಿ ನೀಡಲಾಗುವುದು ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.‌

ಜುಲೈ 19, 2018ರಂದು ಶೀರೂರು ಮಠದ ಹಿರಿಯ ಯತಿ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನರಾಗಿದ್ದರು. ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಬೇಕು ಎಂಬ ಒತ್ತಾಯ ಶ್ರೀಗಳ ಅಭಿಮಾನಿಗಳಿಂದ ಕೇಳಿಬಂದಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.