
ಪ್ರಜಾವಾಣಿ ವಾರ್ತೆಉಡುಪಿ: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.
ಸಂಪ್ರದಾಯದಂತೆ ತೀರ್ಥ ಕ್ಷೇತ್ರಗಳ ದರ್ಶನ ಮುಗಿಸಿ ಉಡುಪಿಯ ಕಡಿಯಾಳಿಗೆ ತಲುಪಿದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಅವರನ್ನು ಮೆರವಣಿಗೆಯಲ್ಲಿ ಮಠಕ್ಕೆ ಕರೆದೊಯ್ಯಲಾಯಿತು.
ಶೀರೂರು ಮಠದ ಪಟ್ಟದೇವರಾದ ರುಕ್ಮಿಣಿ, ಸತ್ಯಭಾಮ ಸಹಿತ ವಿಠಲ ದೇವರನ್ನು
ಮೇಣೆಯಲ್ಲಿಟ್ಟು ಮೆರವಣಿಗೆ ಯಲ್ಲಿ ಕೊಂಡೊಯ್ಯಲಾಯಿತು.
ವೇದವರ್ಧನ ಶ್ರೀಗಳು ಮಯೂರಾಲಂಕೃತ ತೆರೆದ ವಾಹನದಲ್ಲಿ ತೆರಳಿದರು.
ಸಾವಿರಾರು ಮಂದಿ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾತಂಡಗಳು, ಕುಣಿತ ಭಜನೆ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.