ADVERTISEMENT

ಉದ್ಯಾವರ: ಕಲಿಕಾ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 5:05 IST
Last Updated 6 ಆಗಸ್ಟ್ 2025, 5:05 IST
ಉದ್ಯಾವರ ಹಿಂದು ಹಿರಿಯ ಪ್ರಾಥಮಿಕ ಶಾಲೆಗೆ 1ನೇ ತರಗತಿಗೆ ಸೇರ್ಪಡೆಯಾದ 38 ವಿದ್ಯಾರ್ಥಿಗಳಿಗೆ ಉಡುಪಿ ಬನ್ನಂಜೆಯ ಜಯಲಕ್ಷ್ಮಿ ಸಿಲ್ಕ್ಸ್ ಸಂಸ್ಥೆ ವತಿಯಿಂದ ತಲಾ ₹1,800 ವೆಚ್ಚದ ಕಲಿಕಾ ಸಲಕರಣೆ ಒಳಗೊಂಡ ಕಲಿಕಾ ಕಿಟ್‌ಗಳನ್ನು ವಿತರಿಸಲಾಯಿತು
ಉದ್ಯಾವರ ಹಿಂದು ಹಿರಿಯ ಪ್ರಾಥಮಿಕ ಶಾಲೆಗೆ 1ನೇ ತರಗತಿಗೆ ಸೇರ್ಪಡೆಯಾದ 38 ವಿದ್ಯಾರ್ಥಿಗಳಿಗೆ ಉಡುಪಿ ಬನ್ನಂಜೆಯ ಜಯಲಕ್ಷ್ಮಿ ಸಿಲ್ಕ್ಸ್ ಸಂಸ್ಥೆ ವತಿಯಿಂದ ತಲಾ ₹1,800 ವೆಚ್ಚದ ಕಲಿಕಾ ಸಲಕರಣೆ ಒಳಗೊಂಡ ಕಲಿಕಾ ಕಿಟ್‌ಗಳನ್ನು ವಿತರಿಸಲಾಯಿತು   

ಶಿರ್ವ: ಉದ್ಯಾವರ ಹಿಂದು ಹಿರಿಯ ಪ್ರಾಥಮಿಕ ಶಾಲೆಗೆ 1ನೇ ತರಗತಿಗೆ ಸೇರ್ಪಡೆಯಾದ 38 ವಿದ್ಯಾರ್ಥಿಗಳಿಗೆ ಉಡುಪಿ ಬನ್ನಂಜೆಯ ಜಯಲಕ್ಷ್ಮಿ ಸಿಲ್ಕ್ಸ್ ಸಂಸ್ಥೆ ವತಿಯಿಂದ ತಲಾ ₹1,800 ವೆಚ್ಚದ ಕಲಿಕಾ ಸಲಕರಣೆ ಒಳಗೊಂಡ ಕಲಿಕಾ ಕಿಟ್‌ಗಳನ್ನು ವಿತರಿಸಲಾಯಿತು.

ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಗೌರವಾಧ್ಯಕ್ಷ ನಾಗೇಶ್ ಕುಮಾರ್ ಉದ್ಯಾವರ ಅವರು, ಕಲಿಕಾ ಕಿಟ್‌ ವಿತರಿಸಿ ಶುಭಹಾರೈಸಿದರು. ಇದೇ ವೇಳೆ ಶಾಲೆಯ ಶಿಶುವಿಕಾಸ ಕೇಂದ್ರದ 40 ಮಕ್ಕಳಿಗೆ ಶಾಲಾ ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿ ಕಿಟ್‌ಗಳನ್ನು ವಿತರಿಸಲಾಯಿತು. 2025–26ನೇ ಸಾಲಿನ ವಿದ್ಯಾರ್ಥಿ ಕೈಪಿಡಿ ಬಿಡುಗಡೆಗೊಳಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಸಂಚಾಲಕ ಸುರೇಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿಯ ಅಧ್ಯಕ್ಷ ಗಣಪತಿ ಕಾರಂತ್, ಸದಸ್ಯರಾದ ಯುಬಿ ಶ್ರೀನಿವಾಸ್, ಗಣೇಶ್ ಕುಮಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ನವೀನ್ ಅಮೀನ್ ಇದ್ದರು.

ADVERTISEMENT

ಮುಖ್ಯ ಶಿಕ್ಷಕಿ ಅನುರಾಧ ಶೆಟ್ಟಿ ಸ್ವಾಗತಿಸಿದರು. ಆಡಳಿತ ಮಂಡಳಿ ಸದಸ್ಯ ಕೃಷ್ಣಕುಮಾರ್ ಮಟ್ಟು ಪ್ರಾಸ್ತಾವಿಕ ಮಾತನಾಡಿದರು. ಸಹಶಿಕ್ಷಕಿ ಪ್ರಮೀಳಾ ನಿರೂಪಿಸಿದರು. ಸಹ ಶಿಕ್ಷಕಿ ಸುಪ್ರಿಯಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.