ADVERTISEMENT

ಶಿರ್ವ | ಸ್ಕೂಟಿಗೆ ಬಸ್‌ ಡಿಕ್ಕಿ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 6:44 IST
Last Updated 6 ಜನವರಿ 2026, 6:44 IST
ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿರುವುದು
ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿರುವುದು   

ಶಿರ್ವ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಸಮೀಪ ಸೋಮವಾರ ಸ್ಕೂಟಿಗೆ ಬಸ್‌ ಡಿಕ್ಕಿ ಹೊಡೆದು ಸವಾರ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಮೂಲತಃ ಮೂಳೂರಿನ ಕೃಷ್ಣರಾಜ್  ಮೃತರು. ಅವರು ಪಡುಕರೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಪಾಂಗಾಳದ ಅಪಾಯಕಾರಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಉಡುಪಿಯಿಂದ ಕಾಪು ಕಡೆ ಸಾಗುತ್ತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಚಾಲಕನ ಅಜಾಗರೂಕತೆ, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ADVERTISEMENT

ಗಾಯಾಳುವನ್ನು ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಮೂಲಕ ಸಮಾಜ ಸೇವಕ ಜಲಾಲುದ್ದೀನ್, ಹಮೀದ್ ಅವರು ಉಡುಪಿ ಆಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ಗಾಯಾಳು ಮೃತರಾಗಿದ್ದಾರೆ ಎಂದು ತಿಳಿಸಿದರು. ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.