ADVERTISEMENT

ಶಿಶುಮಂದಿರ ಶಿಕ್ಷಣ; ಭವಿಷ್ಯಕ್ಕೆ ಬುನಾದಿ: ಬನ್ನಾಡಿ ನಾರಾಯಣ ಆಚಾರ್

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 6:48 IST
Last Updated 10 ಫೆಬ್ರುವರಿ 2026, 6:48 IST
ಶಿಶುಮಂದಿರದಲ್ಲಿ ಕಲಿತ ಬಾಲಗೋಕುಲದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು
ಶಿಶುಮಂದಿರದಲ್ಲಿ ಕಲಿತ ಬಾಲಗೋಕುಲದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು   

ಕೋಟ(ಬ್ರಹ್ಮಾವರ): ನಮ್ಮ ಪೂರ್ವಜರು ಕಲಿಸಿಕೊಟ್ಟ ಸಂಸ್ಕಾರಯುತ ಶಿಕ್ಷಣವನ್ನು ನಾವು ಮರೆತಿದ್ದೇವೆ. ಆದರೆ, ಸೇವಾಸಂಗಮ ಶಿಶು ಮಂದಿರ ಶಿಕ್ಷಣ ಕೇಂದ್ರವು ಸಂಸ್ಕಾರಯುತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ಮುಂಬೈ ಒಎನ್‌ಜಿಸಿ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹೇಳಿದರು.

ಕೋಟ ಅಮೃತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಕೋಟದ ಸೇವಾಸಂಗಮ ಶಿಶು ಮಂದಿರದ 39ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ಪೋಷಕರು ಮಕ್ಕಳಿಗೆ ನೈಜ ಕಲಿಕಾ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ಶಿಶುಮಂದಿರದಲ್ಲಿ ಸಿಗುವ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಆಗಬೇಕು ಎಂದರು.

ADVERTISEMENT

ಶಿಶುಮಂದಿರದಲ್ಲಿ ಕಲಿತ ಬಾಲಗೋಕುಲದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೋಟ ಸೇವಾಸಂಗಮ ಶಿಶು ಮಂದಿರದ ಅಧ್ಯಕ್ಷ ಶ್ರೀಕಾಂತ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಕುಂದಾಪುರ ಸೇವಾಸಂಗಮ ಶಿಶುಮಂದಿರದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಕುಂದಾಪುರ ಟಿ.ಎನ್.ಪ್ರಭು ಲೆಕ್ಕಪರಿಶೋಧಕ ಸಂಸ್ಥೆಯ ಮುಖ್ಯಸ್ಥೆ ನರ್ಮದಾ ಪ್ರಭು, ಸೇವಾಸಂಗಮ ಶಿಶುಮಂದಿರ ಉಪಾಧ್ಯಕ್ಷೆ ಗೀತಾ ಎ ಕುಂದರ್ ಇದ್ದರು.

ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ಸ್ವಾಗತಿಸಿದರು. ಶಿಶುಮಂದಿರದ ಜತೆ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು. ಕಾರ್ಯದರ್ಶಿ ಸುಷ್ಮಾ ದಯಾನಂದ ಹೊಳ್ಳ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.