ADVERTISEMENT

ಅಧಿಕಾರಕ್ಕಾಗಿ ಶಿವಸೇನೆ ನಾಟಕವಾಡುತ್ತಿದೆ : ಸದಾನಂದ ಗೌಡ ಟೀಕೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 12:57 IST
Last Updated 12 ನವೆಂಬರ್ 2019, 12:57 IST
ಸದಾನಂದ ಗೌಡ, ಕೇಂದ್ರ ಸಚಿವ
ಸದಾನಂದ ಗೌಡ, ಕೇಂದ್ರ ಸಚಿವ   

ಉಡುಪಿ: ಮಹಾರಾಷ್ಟ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮಿತ್ರಪಕ್ಷ ಶಿವಸೇನೆ ನಾಟಕವಾಡುತ್ತಿದೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ಕೇಂದ್ರ ಸಚಿವ ಸದಾನಂದ ಗೌಡ ಟೀಕಿಸಿದರು.

ಪಡುಕರೆಯಲ್ಲಿ ಬೀಚ್‌ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು,ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಜನಾದೇಶ ಸಿಕ್ಕರೂ, ಶಿವಸೇನೆ ಅಡ್ಡಗಾಲಾಗಿದೆ.ಶಿವಸೇನೆ ಹಿಂದಿನಿಂದಲೂ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಮುಂದೆಯೂ ಮಿತ್ರರಾಗಿ ಮುಂದುವರಿಯುವ ಅವಕಾಶವಿದೆ. ಬಿಜೆಪಿಯ ಅರ್ಧದಷ್ಟು ಸ್ಥಾನಗಳನ್ನು ಗೆಲ್ಲದಿದ್ದರೂ ಶಿವಸೇನೆಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದೇವೆ ಎಂದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲ ಪಕ್ಷಗಳಿಗೂ ಸರ್ಕಾರ ರಚಿಸಲು ಮಹಾರಾಷ್ಟ್ರ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತದ ಬಗ್ಗೆ ಚಿಂತಿಸಲಿದ್ದಾರೆ.ರಾಜ್ಯದ ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಪು ಪ್ರಕಟವಾದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು.ಬಿಜೆಪಿ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ದೇಶದ ಏಕತೆ, ಅಖಂಡತೆಗೆ ಬದ್ಧವಾಗಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.