ಕೋಟ (ಬ್ರಹ್ಮಾವರ): ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಕಾರಂತ ಥೀಂ ಪಾರ್ಕ್‌ನಲ್ಲಿ ಡಾ.ಶಿವರಾಮ ಕಾರಂತ ಅವರ 123ನೇ ಜನ್ಮದಿನೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ. ಕುಂದರ್ ಅವರು ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಕಾರಂತರ ಜೀವನಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ, ಅಗತ್ಯತೆ ಇದೆ. ಅವರ ಕೊಡುಗೆ, ಸಾಮಾಜಿಕ ಕಳಕಳಿ, ಸಾಹಿತ್ಯದ ಸಾಧನೆ ನಮಗೆಲ್ಲರಿಗೂ ಮಾದರಿ ಎಂದು ಹೇಳಿದರು.
ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ, ಪಿಡಿಒ ಸುಧಾಕರ ಶೆಟ್ಟಿ, ಉಪಾಧ್ಯಕ್ಷೆ ಸರಸ್ವತಿ, ಸದಸ್ಯರು, ಪ್ರತಿಷ್ಠಾನದ ಸದಸ್ಯರು ಭಾಗವಹಿಸಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು.
ಪ್ರಶಸ್ತಿ ಪ್ರದಾನ ಮುಂದೂಡಿಕೆ: ‘ಈ ಬಾರಿ ನಡೆಯಬೇಕಿದ್ದ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಾರಣಾಂತರದಿಂದ ಮುಂದೂಡಲಾಗಿದೆ’ ಎಂದು ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್ ಬಾರಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.